ರಾಹುಲ್ ಗಾಂಧಿ ನಿಫಾಹ್ ವೈರಸ್ ನಂತೆ: ಹರ್ಯಾಣ ಸಚಿವ
ಹರಿಯಾಣದ ಸಚಿವ ಅನಿಲ್ ವಿಜ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನಿಫಾ ವೈರಸ್‌ಗೆ ಹೋಲಿಸಿದ್ದಾರೆ....

Published On :
ನವದೆಹಲಿ: ಹರಿಯಾಣದ ಸಚಿವ ಅನಿಲ್ ವಿಜ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನಿಫಾ ವೈರಸ್‌ಗೆ ಹೋಲಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರು ನಿಫಾ ವೈರಸ್‍ನಂತೆ. ಯಾವುದೇ ರಾಜಕೀಯ ಪಕ್ಷ ಅವರ ಸಂಪರ್ಕಕ್ಕೆ ಬಂದರೆ ಅವರು ನಾಶವಾಗಿ ಬಿಡುತ್ತಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಬಗ್ಗೆ ಲೇವಡಿ ಮಾಡಿರುವುದು ಇದೇ ಮೊದಲ ಬಾರಿ ಏನೂ ಅಲ್ಲ. ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾದಾಗ ವಿಜ್ ಅವರು ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತವನ್ನು ಕಾಂಗ್ರೆಸ್ ಮುಕ್ತವಾಗಿಸುವುದಕ್ಕೆ ಇದು ಸಹಕಾರಿಯಾಗುತ್ತದೆ ಎಂದು ಹೇಳಿದ್ದರು.
ಭಾರತೀಯಳಾಗಿ ಹುಟ್ಟಿದ್ದಕ್ಕೆ ನಾಚಿಕೆಯಾಗುತ್ತಿದೆ ಎಂದಾದರೆ ಮಮತಾ ಬ್ಯಾನರ್ಜಿ ಅವರು ಸಮುದ್ರಕ್ಕೆ ಹಾರಲಿ. ಕೊಲ್ಕತ್ತಾದಲ್ಲಿ ಸಮುದ್ರ ಹತ್ತಿರವೇ ಇದೆ, ಅಲ್ಲೇ ಹಾರಲಿ ಎಂದು ವಿಜ್ ಹೇಳಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


