ದೊಡ್ಡ ಮಟ್ಟಕ್ಕೆ ಹಾರಲು ಎರಡು ಹೆಜ್ಜೆ ಹಿಂದಕ್ಕೆ ಹೋಗಿದ್ದೇವೆ- ರಾಜನಾಥ್ ಸಿಂಗ್
ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ದೊಡ್ಡ ಮಟ್ಟಕ್ಕೆ ಹಾರಲು ಎರಡು ಹಂತಗಳನ್ನು ಹಿಂದಕ್ಕೆ ಪಡೆದಿರುವುದಾಗಿ ಹೇಳಿದ್ದಾರೆ.

ಭೂಪಾಲ್: ಉತ್ತರ ಪ್ರದೇಶದ ಕೈರಾನಾ ಸೇರಿದಂತೆ ಮೂರು ಲೋಕಸಭಾ ಹಾಗೂ 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ದೊಡ್ಡ ಮಟ್ಟಕ್ಕೆ ಹಾರಲು ಎರಡು ಹೆಜ್ಜೆ ಹಿಂದಕ್ಕೆ ಹೋಗಿರುವುದಾಗಿ ಹೇಳಿದ್ದಾರೆ.
ಮುಂಬರುವ ಲೋಕಭಾ ಚುನಾವಣೆಯಲ್ಲಿ ಉಪಚುನಾವಣೆ ಫಲಿತಾಂಶ ಕುರಿತಂತೆ ಮಾತನಾಡಿದ ಅವರು, ದೊಡ್ಡ ಮಟ್ಟದ ಸಾಧನೆ ಮಾಡಲು ಯಾವಾಗಲೂ ಎರಡು ಹಂತಗಳನ್ನು ಹಿಂದಕ್ಕೆ ಹೋಗಬೇಕಾಗುತ್ತದೆ ಎಂದರು.
ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಸಾಧನೆಗಳನ್ನು ವಿವರಿಸಿದ ರಾಜನಾಥ್ ಸಿಂಗ್ ,ಮುಂಬರುವ ರಾಜ್ಯ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕೈರಾನಾ ಹಾಗೂ ಬಾಂದ್ರಾ- ಗೊಂಡಿಯಾ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಶರಣಾಗಿತ್ತು. ಆದಾಗ್ಯೂ, ಮಹಾರಾಷ್ಟ್ರದ ಫಲ್ಗರ್ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


