ದೇಶ

ಲೈಂಗಿಕ ದೌರ್ಜನ್ಯಕ್ಕೊಳಗಾದ ಗಂಡು ಮಕ್ಕಳಿಗೂ ಪರಿಹಾರ: ಮನೇಕಾ ಗಾಂಧಿ

ಲೈಂಗಿಕ ದೌರ್ಜನ್ಯಕ್ಕೊಳಗಾದ ಗಂಡು ಮಕ್ಕಳಿಗೂ ಸಂತ್ರಸ್ತ ಪರಿಹಾರ ನಿಧಿಯಿಂದ ಪರಿಹಾರ ನೀಡಬೇಕು ಎಂದು ಕೇಂದ್ರ ಸಚಿವೆ ಮನೇಕಾ ಗಾಂಧಿ....

ಲೈಂಗಿಕ ದೌರ್ಜನ್ಯಕ್ಕೊಳಗಾದ ಗಂಡು ಮಕ್ಕಳಿಗೂ ಪರಿಹಾರ: ಮನೇಕಾ ಗಾಂಧಿ
ಮನೇಕಾ ಗಾಂಧಿ
Published On :
ನವದೆಹಲಿ: ಲೈಂಗಿಕ ದೌರ್ಜನ್ಯಕ್ಕೊಳಗಾದ ಗಂಡು ಮಕ್ಕಳಿಗೂ ಸಂತ್ರಸ್ತ ಪರಿಹಾರ ನಿಧಿಯಿಂದ ಪರಿಹಾರ ನೀಡಬೇಕು ಎಂದು ಕೇಂದ್ರ ಸಚಿವೆ ಮನೇಕಾ ಗಾಂಧಿ ಎಲ್ಲಾ ರಾಜ್ಯಗಳೂ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ  ಸೂಚಿಸಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಈ ಸಂಬಂಧ ಪತ್ರ ಬರೆದಿರುವ ಮನೇಕಾ ಗಾಂಧಿ, ಸಂತ್ರಸ್ತರಿಗೆ ಸರಿಯಾದ ಸಮಯದಲ್ಲಿ ಮಧ್ಯಂತರ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.
ಸಂತ್ರಸ್ತರ ಪರಿಹಾರ ನಿಧಿಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಗಂಡು ಮಕ್ಕಳಿಗೂ  ಪರಿಹಾರ ನೀಡುವಂತೆ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದ್ದಾರೆ.
ಪೊಕ್ಸೋ ಕಾಯಿದೆಯಡಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವುದರ ಜೊತೆಗೂ ಗಂಡು ಮಕ್ಕಳಿಗೂ ಭದ್ರತೆ ನೀಡಬೇಕೆಂದು ಹೇಳಿದ್ದಾರೆ. ದೇಶದ 31 ರಾಜ್ಯಗಳು ಸಂತ್ರಸ್ತರ ಪರಿಹಾರ ನಿಧಿ ನಿಯಮ 7ರ ಅಡಿಯಲ್ಲಿ ಪರಿಹಾರ ಯೋಜನೆ ಅಳವಡಿಸಿಕೊಳ್ಳುವಂತೆ ಪತ್ರದಲ್ಲಿ  ತಿಳಿಸಿದ್ದಾರೆ, 
ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ರಾಜ್ಯಗಳು ಮಧ್ಯಂತರ ಪರಿಹಾರ ನೀಡುವುದರ ಜೊತೆಗೆ ಅವರ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಎಲ್ಲಾ ರೀತಿಯ ಅವಶ್ಯಕತೆಗಳನ್ನು ಪೂರೈಸಬೇಕೆಂದು ತಿಳಿಸಿದ್ದಾರೆ.ಮಕ್ಕಳ ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ  ಸಂತ್ರಸ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.