ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ಜು.3ರವರೆಗೆ ಪಿ.ಚಿದಂಬರಂ ಬಂಧನವಿಲ್ಲ

ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಜು.3 ವರೆಗೂ ಸಿಬಿಐ ಬಂಧನದಿಂದ ವಿನಾಯಿತಿಯನ್ನು ದೆಹಲಿ ನ್ಯಾಯಾಲಯ ಗುರುವಾರ ನೀಡಿದೆ...

ಐಎನ್ಎಕ್ಸ್ ಮೀಡಿಯಾ ಹಗರಣ: ಜು.3ರವರೆಗೆ ಪಿ.ಚಿದಂಬರಂ ಬಂಧನವಿಲ್ಲ
ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ
Published On :
ನವದೆಹಲಿ; ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಜು.3 ವರೆಗೂ ಸಿಬಿಐ ಬಂಧನದಿಂದ ವಿನಾಯಿತಿಯನ್ನು ದೆಹಲಿ ನ್ಯಾಯಾಲಯ ಗುರುವಾರ ನೀಡಿದೆ. 
ರೂ.3,500 ಕೋಟಿ ಮೊತ್ತದ ಏರ್'ಸೆಲ್ ಮ್ಯಾಕ್ಸಿಸ್ ಮತ್ತು ರೂ.305 ಕೋಟಿ ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಎರಡೂ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಿನ್ನೆಯಷ್ಟೇ ನ್ಯಾಯಾಲಯದ ಮೊರೆ ಹೋಗಿದ್ದರು. 
ಇದರಂತೆ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎ.ಕೆ.ಪಥಕ್ ಅವರು, ಜು.3ರವರೆಗೂ ಬಂಧನದಿಂದ ವಿನಾಯಿತಿ ನೀಡಿದ್ದು, ಚಿದಂಬರಂ ವಿರುದ್ಧ ಯಾವುದೇ ರೀತಿಯ ಒತ್ತಾಯಪೂರ್ವಕ ಕ್ರಮಗಳನ್ನು ಕೈಗೊಳ್ಳದಂತೆ ಸಿಬಿಐಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 
ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜೂ.5 ರಂದು ವಿಚಾರಣೆಗೆ ಹಾಜರಾಗುವಂತೆ ಚಿದಂಬರಂಗೆ ಸೂಚಿಸಿತ್ತು. ಜೊತೆಗೆ ಜೂ.5ರವರೆಗೆ ಚಿದಂಬರಂ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.