ಏರ್ ಇಂಡಿಯಾ ಕೊಳ್ಳುವವರೇ ಇಲ್ಲ, ಗಡುವು ವಿಸ್ತರಣೆ ಮಾಡುವುದಿಲ್ಲ: ಕೇಂದ್ರ ಸರ್ಕಾರ
ನಷ್ಟದ ಸುಳಿಗೆ ಸಿಲುಕಿರುವ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಕಂಪನಿಯ ಷೇರುಗಳನ್ನು ಖರೀದಿಸಲು ಇದುವರೆಗೂ ಯಾರೂ ಮುಂದೆ ಬಂದಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

Published On :
ನವದೆಹಲಿ: ನಷ್ಟದ ಸುಳಿಗೆ ಸಿಲುಕಿರುವ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಕಂಪನಿಯ ಷೇರುಗಳನ್ನು ಖರೀದಿಸಲು ಇದುವರೆಗೂ ಯಾರೂ ಮುಂದೆ ಬಂದಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.
ಈ ಹಿಂದೆ ಕೇಂದ್ರ ಸರ್ಕಾರ ಘೋಷಣೆ ಮಾಡಿದಂತೆ ಏರ್ ಇಂಡಿಯಾ ಷೇರುಗಳ ಮಾರಾಟಕ್ಕೆ ಬಿಡ್ ಕೂಗಲಾಗಿತ್ತಾದರೂ ಈವರೆಗೂ ಯಾವುದೇ ಸಂಸ್ಥೆಗಳೂ ಷೇರುಗಳ ಕೊಳ್ಳಲು ಮುಂದೆ ಬಂದಿಲ್ಲ. ಈ ಬಗ್ಗೆ ಮಾತನಾಡಿರುವ ಕೇಂದ್ರ ನಾಗರಿಕ ವಿಮಾನಯಾನ ಕಾರ್ಯದರ್ಶಿ ಆರ್. ಎನ್. ಚೌಬೆ ಅವರು, ಏರ್ ಇಂಡಿಯಾ ಷೇರುಗಳ ಮಾರಾಟ ಪ್ರಕ್ರಿಯೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ವರೆಗೂ ಷೇರುಗಳ ಖರೀದಿಗೆ ಯಾವುದೇ ಬಿಡ್ ಸಲ್ಲಿಕೆಯಾಗಿಲ್ಲ.
ಏರ್ ಇಂಡಿಯಾ ಷೇರುಗಳ ಖರೀದಿಗೆ ಬಿಡ್ ಸಲ್ಲಿಸಲು ಗುರುವಾರ (ಮೇ 31) ಕೊನೆಯ ದಿನವಾಗಿದೆ ಎಂದು ಹೇಳಿದರು.
ಅಂತೆಯೇ ಈಗಾಗಲೇ ಬಿಡ್ ಸಲ್ಲಿಕೆ ಅವಧಿಯನ್ನು ಮೇ 14 ರಿಂದ ಮೇ 31ರ ವರೆಗೆ ವಿಸ್ತರಿಸಲಾಗಿದೆ. ಬಿಡ್ ಸಲ್ಲಿಕೆ ಅವಧಿಯನ್ನು ಮತ್ತಷ್ಟು ವಿಸ್ತರಿಸಲು ಸಾಧ್ಯವಿಲ್ಲ ಎಂದು ಚೌಬೆ ತಿಳಿಸಿದ್ದಾರೆ.
ಇನ್ನು ಏರ್ ಇಂಡಿಯಾ ಕಂಪನಿಯ ಶೇ.76 ರಷ್ಟು ಶೇರುಗಳನ್ನು ಮಾರಾಟ ಮಾಡುವ ಮೂಲಕ ಬಂಡವಾಳ ಹಿಂಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ, ಷೇರು ಖರೀದಿಯ ನಿಯಮಾವಳಿಗಳನ್ನು ಬಿಡುಗಡೆ ಮಾಡಿದ ನಂತರ ಯಾವುದೇ ಕಂಪನಿ ಷೇರು ಖರೀದಿಗೆ ಆಸಕ್ತಿ ತೋರುತ್ತಿಲ್ಲ. ಕೆಲವು ಕಂಪನಿಗಳು ತಾವು ಷೇರು ಖರೀದಿಗೆ ಮುಂದಾಗುವುದಿಲ್ಲ ಎಂದು ಸಾರ್ವಜನಿಕವಾಗಿಯೇ ಘೋಷಣೆ ಮಾಡಿವೆ. ಇದಕ್ಕೂ ಮೊದಲು ಟಾಟಾ ಗ್ರೂಪ್ ಏರ್ ಇಂಡಿಯಾದಲ್ಲಿ ಹೂಡಿಕೆ ಮಾಡಲು ಆಸಕ್ತ ತೋರುತ್ತಿದೆ ಎಂದು ಸುದ್ದಿಯಾಗಿತ್ತು. ಆದರೆ, ಟಾಟಾ ಸಂಸ್ಥೆ ಕೂಡ ಇದುವರೆಗೆ ಷೇರು ಖರೀದಿ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


