ದೇಶ

ಛತ್ತೀಸ್ಗಢ: ನಕ್ಸಲರಿಂದ ಐಇಡಿ ಸ್ಫೋಟ, 2 ಯೋಧರಿಗೆ ಗಂಭೀರ ಗಾಯ

ಛತ್ತೀಸ್ಗಢದ ಕಂಕೆರ್ ಜಿಲ್ಲೆಯಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದು, ಘಟನೆಯಲ್ಲಿ ಇಬ್ಬರು ಗಡಿ ಭದ್ರತಾ ಪಡೆಯ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...

ಛತ್ತೀಸ್ಗಢ: ನಕ್ಸಲರಿಂದ ಐಇಡಿ ಸ್ಫೋಟ, 2 ಯೋಧರಿಗೆ ಗಂಭೀರ ಗಾಯ
ಸಂಗ್ರಹ ಚಿತ್ರ
Published On :
ರಾಯಪುರ: ಛತ್ತೀಸ್ಗಢದ ಕಂಕೆರ್ ಜಿಲ್ಲೆಯಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದು, ಘಟನೆಯಲ್ಲಿ ಇಬ್ಬರು ಗಡಿ ಭದ್ರತಾ ಪಡೆಯ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. 
ಕೊಯಾಲಿಬೆಡ ಪೊಲೀಸ್ ಠಾಣೆಯ ಅರಣ್ಯ ಪ್ರದೇಶದಲ್ಲಿ ಬಿಎಸ್ಎಫ್ 35 ಬೆಟಾಲಿಯನ್ ಪಡೆಗಳು ಕಾರ್ಯಾಚರಣೆ ನಡೆಸಲುವ ಸಲುವಾಗಿ ಬರುತ್ತಿದ್ದವು. ಈ ವೇಳೆ ನಕ್ಸಲರು ಐಇಡಿ ಸ್ಫೋಟಿಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. 
ಘಟನೆಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 
ಪ್ರಸ್ತುತ ಸ್ಥಳದಲ್ಲಿ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದು, ಮೂಲಗಳ ಪ್ರಕಾರ ನಕ್ಸಲ್ ನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. 
ಅ.30 ರಂದು ಛತ್ತೀಸ್ಗಢದ ದಂತೇವಾಡದಲ್ಲಿ ನಕ್ಸಲರು ಭೀಕರ ದಾಳಿ ನಡೆಸಿದ್ದರು. ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿ, ದೂರದರ್ಶನದ ಕ್ಯಾಮೆರಾಮೆನ್ ಒಬ್ಬ ಮೃತಪಟ್ಟಿದ್ದ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.