ದೇಶ

ಮೋಹನ್ ಭಾಗವತ್ ಭೇಟಿಯಾದ ಅಮಿತ್ ಶಾ: ರಾಮ ಮಂದಿರ ಕುರಿತು ಮಹತ್ವದ ಮಾತುಕತೆ?

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭೇಟಿ ಮಾಡಿದ್ದು, ರಾಮ ಮಂದಿರ ನಿರ್ಮಾಣ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ...

ಮೋಹನ್ ಭಾಗವತ್ ಭೇಟಿಯಾದ ಅಮಿತ್ ಶಾ: ರಾಮ ಮಂದಿರ ಕುರಿತು ಮಹತ್ವದ ಮಾತುಕತೆ?
ಮೋಹನ್ ಭಾಗವತ್ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
Published On :
ಮುಂಬೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭೇಟಿ ಮಾಡಿದ್ದು, ರಾಮ ಮಂದಿರ ನಿರ್ಮಾಣ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅಮಿತ್ ಶಾ ಹಾಗೂ ಭಾಗವತ್ ಇಬ್ಬರು ನಂತರ ಭೇಟಿ ಮಾಡಿ ರಾಮಮಂದಿರ ವಿಚಾರ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಇದಲ್ಲದೆ ಆರ್'ಎಸ್ಎಸ್'ನ ಹಲವು ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 
ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತಂತೆ ಸುಪ್ರೀಂಕೋರ್ಟ್, ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ನಕಾರ ಸೂಚಿಸಿರುವುದು ಹಾಗೂ ಶಬರಿಮಲೆಗೆ ಎಲ್ಲಾ ಮಹಿಳೆಯರ ಭೇಟಿಗೆ ಅವಕಾಶ ನೀಡಿರುವುದು ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಉಭಯ ನಾಯಕರ ಈ ಭೇಟಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. 
ಅಯೋಧ್ಯೆ ರಾಮ ಮಂದಿರ ನಿರ್ಮಾಣ ಮಾಡುವಂತೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕೆಂದು ಆರ್'ಎಸ್ಎಸ್ ಆಗ್ರಹಿಸುತ್ತಿದ್ದು, ಭೇಟಿ ವೇಳೆ ಅಮಿತ್ ಶಾ ಹಾಗೂ ಭಾಗವತ್ ಇಬ್ಬರೂ ಈ ಕುರಿತು ಮಾತುಕತೆ ನಡೆಸಿರುವ ಸಾಧ್ಯತೆಗಳಿವೆ. ಅಲ್ಲದೆ, ಮುಂಬರುವ ಲೋಕಸಭಾ ಚುನಾವಣೆ ಕುರಿತಂತೆಯೂ ಚರ್ಚೆ ನಡೆಸಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.