ಕಪ್ಪುಹಣ ಕೇಸ್: ಮದ್ರಾಸ್ ಹೈಕೋರ್ಟ್ ನಿಂದ ಚಿದಂಬರಂ ಕುಟುಂಬಸ್ಥರ ವಿರುದ್ಧದ ಕ್ರಿಮಿನಲ್ ವಿಚಾರಣೆ ವಜಾ
ಕಪ್ಪುಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಕುಟುಂಬ ಸದಸ್ಯರ ವಿರುದ್ಧದ ಕ್ರಿಮಿನಲ್ ...

ಚೆನ್ನೈ: ಕಪ್ಪುಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಕುಟುಂಬ ಸದಸ್ಯರ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ಕಪ್ಪು ಹಣ ಕಾಯಿದೆ ಅನ್ವಯ ಹಾಗೂ ವಿದೇಶದಲ್ಲಿ ಆಸ್ತಿ ಹೊಂದಿರುವ ಸಂಬಂಧ ಚಿದಂಬರಂ ಕುಟುಂಬ ಸದಸ್ಯರ ವಿರುದ್ಧ ಆದಾಯ ತೆರಿಗೆ ಇಲಾಖೆ ಕೇಸ್ ದಾಖಲಿಸಿತ್ತು.
ನ್ಯಾಯಮೂರ್ತಿ ಎಸ್ ಮಣಿಕುಮಾರ್ ಮತ್ತು ಜಸ್ಟೀಸ್ ಸುಬ್ರಮಣಿಯಮ್ ಪ್ರಸಾದ್ ಅವರನ್ನೊಳಗೊಂಡ ವಿಭಾಗೀಯ ಪೀಠ ವಜಾಗೊಳಿಸಿದೆ.
ಚಿದಂಬರಂ ಪತ್ನಿ ನಳಿನಿ, ಪುತ್ರ ಕಾರ್ತಿ ಚಿದಂಬರಂ ಹಾಗೂ ಸೊಸೆ ಶ್ರೀನಿಧಿ ತಮ್ಮ ವಿರುದ್ಧದ ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ ವಜಾಗೊಳಿಸಿದೆ. ಜೊತೆಗೆ ಅವರ ವಿರುದ್ಧ ದಾಖಲಿಸಿದ್ದ ಖಾಸಗಿ ದೂರುಗಳನ್ನು ಕೂಡ ರದ್ದುಗೊಳಿಸಿದೆ.
ವಿದೇಶಿ ಆಸ್ತಿಗಳ ವಿವರ ಬಹಿರಂಗ ಗೊಳಿಸದ ಕಾರಣ ಚಿದಂಬರಂ ಕುಟುಂಬಸ್ಥರ ವಿರುದ್ಧ ಐಟಿ ಇಲಾಖೆ ದೂರು ದಾಖಲಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


