ಸಿಬಿಐ ವಿವಾದ: ಅಲೋಕ್ ವರ್ಮಾ ಬೆಂಬಲಕ್ಕೆ ನಿಂತ ಕಾಂಗ್ರೆಸ್, 'ಸುಪ್ರೀಂ' ನಲ್ಲಿ ಅರ್ಜಿ
ಕೇಂದ್ರ ಸರ್ಕಾರ ಮತ್ತು ಸಿಬಿಐ ನಡುವಿನ ತಿಕ್ಕಾಟ ತಾರಕಕ್ಕೇರಿರುವಂತೆಯೇ ಪ್ರತಿಪಕ್ಷ ಕಾಂಗ್ರೆಸ್ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಬೆನ್ನಿಗೆ ನಿಂತಿದ್ದು, ಸಿಬಿಐ ಮುಖ್ಯಸ್ಥ ಅಧಿಕಾರಾವಧಿಯನ್ನು ಮೊಟಕುಗೊಳಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಹೇಳಿದೆ.

Published On :
ನವದೆಹಲಿ: ಕೇಂದ್ರ ಸರ್ಕಾರ ಮತ್ತು ಸಿಬಿಐ ನಡುವಿನ ತಿಕ್ಕಾಟ ತಾರಕಕ್ಕೇರಿರುವಂತೆಯೇ ಪ್ರತಿಪಕ್ಷ ಕಾಂಗ್ರೆಸ್ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಬೆನ್ನಿಗೆ ನಿಂತಿದ್ದು, ಸಿಬಿಐ ಮುಖ್ಯಸ್ಥ ಅಧಿಕಾರಾವಧಿಯನ್ನು ಮೊಟಕುಗೊಳಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಹೇಳಿದೆ.
ಅಲ್ಲದೆ ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಅರ್ಜಿ ಸಲ್ಲಿಕೆ ಮಾಡಿದ್ದು, ತನ್ನ ಅರ್ಜಿಯಲ್ಲಿ ಸಿಬಿಐ ಸ್ವಾಯತ್ತ ತನಿಖಾ ಸಂಸ್ಥೆಯಾಗಿದ್ದು ಆ ಸಂಸ್ಥೆಯ ನಿರ್ದೇಶಕರ ಅಧಿಕಾರಾವಧಿಯನ್ನು ಮೊಟಕುಗೊಳಿಸುವ ಹಕ್ಕು ಕೇಂದ್ರೀಯ ವಿಚಕ್ಷಣ ಸಮಿತಿ (ಸಿವಿಸಿ)ಗಾಗಲಿ ಅಥವಾ ಕೇಂದ್ರ ಸರ್ಕಾರಕ್ಕಾಗಲಿ ಇಲ್ಲ ಎಂದು ಕಾಂಗ್ರೆಸ್ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸಿಬಿಐ ನಿರ್ದೇಶಕರ ಅಧಿಕಾರಾವಧಿ ಇನ್ನೂ 2 ವರ್ಷ ಬಾಕಿ ಇದ್ದು, ಅವರ ಅಧಿಕಾರಾವಧಿಯನ್ನು ಮೊಟಕುಗೊಳಿಸುವ ಕೇಂದ್ರ ಸರ್ಕಾರದ ಕ್ರಮ ಅನಿಯಂತ್ರಿತ ಮತ್ತು ಅಕ್ರಮ ಎಂದು ಖರ್ಗೆ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.
ಇನ್ನು ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರವನ್ನು ಟೀಕಿಸಿ ಉಧ್ಯಮಿ ಅನಿಲ್ ಅಂಬಾನಿ ಅವರಿಗೆ ನೆರವು ನೀಡುವ ಉದ್ದೇಶದಿಂದ ರಾಫೆಲ್ ಡೀಲ್ ನಲ್ಲಿ ರಿಲಯನ್ಸ್ ಡಿಫೆನ್ಸ್ ಸಂಸ್ಥೆಯನ್ನು ಪಾಲುದಾರರನ್ನಾಗಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇಲ್ಲದೆ ಅನಿಲ್ ಅಂಬಾನಿ ಮತ್ತು ಮೋದಿ ನಡುವೆ ಸುಮಾರು 30 ಸಾವಿರ ಕೋಟಿ ರೂ ಡೀಲ್ ನಡೆದಿದ್ದು, ಡಸ್ಸಾಲ್ಟ್ ಏವಿಯೇಷನ್ ನೀಡಿದ 284 ಕೋಟಿ ಹಣದಿಂದಲೇ ರಿಲಯನ್ಸ್ ಡಿಫೆನ್ಸ್ ಭೂಮಿ ಖರೀದಿ ಮಾಡಿತ್ತು ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿCongressಕಾಂಗ್ರೆಸ್New DelhiCBIಸಿಬಿಐಮಲ್ಲಿಕಾರ್ಜುನ ಖರ್ಗೆಮೋದಿ ಸರ್ಕಾರMallikarjuna KhargeModi govtAlok Vermaಅಲೋಕ್ ವರ್ಮಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


