ಅಯೋಧ್ಯೆಯಲ್ಲಿ ರಾಮ ಮಂದಿರ, ಲಖನೌನಲ್ಲಿ ಮಸೀದಿ ನಿರ್ಮಾಣ: ರಾಮ ಜನ್ಮಭೂಮಿ ನ್ಯಾಸ ಅಧ್ಯಕ್ಷ
ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಹಾಗೂ ಲಖನೌನಲ್ಲಿ ಮಸೀದಿ ನಿರ್ಮಾಣ ಮಾಡಲಾಗುತ್ತದೆ ಎಂದು ಬಿಜೆಪಿ ಮಾಜಿ ಸಂಸದ ಹಾಗೂ ರಾಮ ಜನ್ಮಭೂಮಿ ನ್ಯಾಸ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿಯವರು ಶನಿವಾರ ಹೇಳಿದ್ದಾರೆ...

Published On :
ನವದೆಹಲಿ: ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಹಾಗೂ ಲಖನೌನಲ್ಲಿ ಮಸೀದಿ ನಿರ್ಮಾಣ ಮಾಡಲಾಗುತ್ತದೆ ಎಂದು ಬಿಜೆಪಿ ಮಾಜಿ ಸಂಸದ ಹಾಗೂ ರಾಮ ಜನ್ಮಭೂಮಿ ನ್ಯಾಸ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿಯವರು ಶನಿವಾರ ಹೇಳಿದ್ದಾರೆ.
ಅಯೋಧ್ಯೆ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಡಿಸೆಂಬರ್ ನಿಂದ ಆರಂಭಗೊಳ್ಳಲಿದೆ. ಯಾವುದೇ ಸುಗ್ರೀವಾಜ್ಞೆಗಳಿಲ್ಲದೆಯೇ ಪರಸ್ಪರ ಒಪ್ಪಿಗೆ ಮೂಲಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಗೊಳ್ಳುತ್ತದೆ. ಲಖನೌನಲ್ಲಿ ಮಸೀದಿ ನಿರ್ಮಾಣ ಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಈ ಹೇಳಿಕೆ ನೀಡಿದ್ದ ವೇದಾಂತಿಯವರು ಅಯೋಧ್ಯೆ ರಾಮ ಮಂದಿರ ವಿವಾದವನ್ನು ಬಿಜೆಪಿ ಬಗೆಹರಿಸಲಿದೆ. 2019 ಲೋಕಸಭಾ ಚುನಾವಣೆಗೂ ಮುನ್ನವೇ ರಾಮ ಮಂದಿರ ನಿರ್ಮಾಣ ಆರಂಭಗೊಳ್ಳಲಿದೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Ram templeAyodhyaಅಯೋಧ್ಯೆರಾಮ ಮಂದಿರRam Vilas VedantiRam Janambhoomi Nyas presidentರಾಮ ಜನ್ಮಭೂಮಿ ನ್ಯಾಸ ಅಧ್ಯಕ್ಷ ರಾಮ ವಿಲಾಸ್ ವೇದಾಂತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


