ಕಣಿವೆ ರಾಜ್ಯದಲ್ಲಿ ಮತ್ತೆ ಇಬ್ಬರು ಉಗ್ರರ ಹುಟ್ಟಡಗಿಸಿದ ಭಾರತೀಯ ಸೇನೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆಯಲು ಯತ್ನಿಸಿದ್ದು, ಉಗ್ರರನ್ನು ಭಾರತೀಯ ಸೇನೆ ಸಮರ್ಥವಾಗಿ ಹಿಮ್ಮಟ್ಟಿಸಿದೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆಯಲು ಯತ್ನಿಸಿದ್ದು, ಉಗ್ರರನ್ನು ಭಾರತೀಯ ಸೇನೆ ಸಮರ್ಥವಾಗಿ ಹಿಮ್ಮಟ್ಟಿಸಿದೆ.
ಶೋಪಿಯಾನ್ ನಲ್ಲಿ ಭಾರತೀಯ ಗಡಿ ದಾಟಿ ಒಳ ನುಸುಳಿದ್ದ ನಾಲ್ಕು ಮಂದಿ ಉಗ್ರರ ಮೇಲೆ ಸೇನೆ ಮುಗಿಬಿದ್ದಿದ್ದು, ಈ ಪೈಕಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಮತ್ತಿಬ್ಬರು ಉಗ್ರರು ಸೇನಾ ದಾಳಿಗೆ ಹೆದರಿ ಪರಾರಿಯಾಗಿದ್ದಾರೆ.
ಶೋಪಿಯಾನ್ ನ ಖುಡ್ ಪೋರ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳ ಗುಂಡಿಗೆ ಸಿಕ್ಕಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಅಂತೆಯೇ ಮತ್ತಿಬ್ಬರು ಉಗ್ರರು ಪರಾರಿಯಾಗಿದ್ದು, ಅವರಿಗಾಗೆ ಸೇನೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆShopian encounterಶೋಪಿಯಾನ್ ಎನ್ ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


