ದೇಶ

ನೀಚ ಕೃತ್ಯ: ಶಾಲಾ ಕೊಠಡಿಯೊಳಗೆ ಶಿಕ್ಷಕರಿಬ್ಬರ ಚುಂಬನ, ವಿಡಿಯೋ ವೈರಲ್!

ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ, ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ಅಂತ ಶಿಕ್ಷಕರನ್ನು ಅತ್ಯಂತ ಗೌರವದಿಂದ ಕಾಣಲಾಗುತ್ತದೆ...

ನೀಚ ಕೃತ್ಯ: ಶಾಲಾ ಕೊಠಡಿಯೊಳಗೆ ಶಿಕ್ಷಕರಿಬ್ಬರ ಚುಂಬನ, ವಿಡಿಯೋ ವೈರಲ್!
ಸಂಗ್ರಹ ಚಿತ್ರ
Published On :
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ, ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ಅಂತ ಶಿಕ್ಷಕರನ್ನು ಅತ್ಯಂತ ಗೌರವದಿಂದ ಕಾಣಲಾಗುತ್ತದೆ. ಆದರೆ ಇಲ್ಲಿ ಶಿಕ್ಷಕರಿಬ್ಬರು ಶಾಲೆಯ ಕೊಠಡಿಯೊಳಗೆ ಅಶ್ಲೀಲವಾಗಿ ವರ್ತಿಸಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. 
ಶಿಕ್ಷಕ ಹಾಗೂ ಶಿಕ್ಷಕಿಯೊಬ್ಬರು ಯಾರು ಇಲ್ಲ ಅಂತ ಪರಸ್ಪರ ಕಿಸ್ ಮಾಡುವುದರಲ್ಲಿ ನಿರತರಾಗಿದ್ದು ಇದನ್ನು ಯಾರೋ ಒಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು ವಿಡಿಯೋ ವೈರಲ್ ಆಗಿದೆ. 
ವಿಡಿಯೋದಲ್ಲಿ ಶಿಕ್ಷಕರಿಬ್ಬರು ಪರಸ್ಪರ ಮುತ್ತಿಕ್ಕುವ ದೃಶ್ಯ ಸೆರೆಯಾಗಿದ್ದು ಇವರಿಬ್ಬರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. 
ಗುಜರಾತ್ ನ ದಾಹೋದ್ ನ ಪ್ರಾಥಮಿಕ ಶಾಲೆಯಲ್ಲಿ ನೀಚ ಘಟನೆ ನಡೆದಿದ್ದು ಸ್ಥಳೀಯ ಪ್ರಾಥಮಿಕ ಶಾಲಾ ಮುಖ್ಯಾಧಿಕಾರಿಗೆ ದೂರು ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.