ದೇಶ

ಐದು ವರ್ಷಗಳಲ್ಲಿ ಮೋದಿ ಸರ್ಕಾರದ ಸಾಧನೆ ಶೂನ್ಯ: ಚಿದಂಬರಂ

ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ತಾನು ನೀಡಿದ್ದ....

ಐದು ವರ್ಷಗಳಲ್ಲಿ ಮೋದಿ ಸರ್ಕಾರದ ಸಾಧನೆ ಶೂನ್ಯ: ಚಿದಂಬರಂ
ಪಿ ಚಿದಂಬರಂ
Published On :
ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ತಾನು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಮತ್ತು ಅದರ ಸಾಧನೆ ಶೂನ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರ, ಉದ್ಯೋಗ, ಅಭಿವೃದ್ಧಿ, ಜನರ ಖಾತೆಗೆ ಹಣ ಜಮೆ ಮಾಡುವ ಭರವಸೆ ನೀಡಿತ್ತು. ಆ ಯಾವ ಭರವಸೆಯನ್ನು ಈಡೇರಿಸಿದ ಮೋದಿ ಸರ್ಕಾರ ಈಗ ಭವ್ಯ ದೇವಸ್ಥಾನ, ಪ್ರತಿಮೆಗಳ ನಿರ್ಮಾಣದ ಭರವಸೆ ನೀಡುತ್ತಿದೆ ಎಂದು ಚಿದಂಬರಂ ಟೀಕಿಸಿದ್ದಾರೆ.
ಪ್ರಧಾನಿ ಮೋದಿ ಅವರು ಇತ್ತೀಚಿಗೆ ಗುಜರಾತ್ ನಲ್ಲಿ ದೇಶದ ಮೊದಲ ಗೃಹಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪ್ರತಿಮೆ ಅನಾವರಣಗೊಳಿಸಿದ ನಂತರ ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣದ ಭರವಸೆ ನೀಡುತ್ತಿರುವುದಕ್ಕೆ ಚಿದಂಬರಂ ಈ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಾವ ಸಾಧನೆಯನ್ನೂ  ಮಾಡಿಲ್ಲ. ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ. ಭವ್ಯ ರಾಮ ಮಂದಿರವನ್ನು ನಿರ್ಮಿಸುವ ಮತ್ತು ಜನರಿಗೆ ಆಮಿಷ ಒಡ್ಡುವ, ಭರವಸೆಗಳನ್ನು ನೀಡುವುದರಲ್ಲಿ ತೊಡಗಿದ್ದಾರೆ' ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.