ಇನ್ಮುಂದೆ ಫೈಜಾಬಾದ್ ಅಲ್ಲ, 'ಅಯೋಧ್ಯೆ' ಹೆಸರು ಬದಲಾವಣೆ: ಸಿಎಂ ಯೋಗಿ ಆದಿತ್ಯನಾಥ್
ಅಲಹಾಬಾದ್ ಹೆಸರನ್ನು ಪ್ರಯಾಗ್ ರಾಜ್ ಎಂದು ಬದಲಾಯಿಸಿದ್ದ ಬೆನ್ನಲ್ಲೇ ಇದೀಗ ಫೈಜಾಬಾದ್‌ಗೆ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ...

Published On :
ಲಖನೌ: ಅಲಹಾಬಾದ್ ಹೆಸರನ್ನು ಪ್ರಯಾಗ್ ರಾಜ್ ಎಂದು ಬದಲಾಯಿಸಿದ್ದ ಬೆನ್ನಲ್ಲೇ ಇದೀಗ ಫೈಜಾಬಾದ್‌ಗೆ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ದೀಪಾವಳಿ ಕಾರ್ಯಕ್ರಮಗಳು ನಡೆಯುತ್ತಿದ್ದು ಈ ವೇಳೆ ಮಾತನಾಡಿದ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲಾಗುವುದು ಹೇಳಿದ್ದಾರೆ.
ಇನ್ನು ಅಯೋಧ್ಯೆ ನಂಟಿರುವ ದಕ್ಷಿಣ ಕೊರಿಯಾದ ಪ್ರಥಮ ಮಹಿಳೆ ಕಿಮ್ ಜುಂಗ್ ಸೂಕ್ ಅವರು ಅಯೋಧ್ಯೆಯಲ್ಲಿ ನಡೆಯುತ್ತಿರುವ ದೀಪಾವಳಿ ಕಾರ್ಯಮಕ್ರಮದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೂಕ್ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


