ಪಿಎನ್ಬಿ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಸಹಾಯಕನ ವಶಕ್ಕೆ ಪಡೆದ ಇಡಿ
ಬಿಲಿಯನ್ ಪಿಎನ್ಬಿ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಯ....

Published On :
ಕೋಲ್ಕತ್ತಾ: 2 ಬಿಲಿಯನ್ ಪಿಎನ್ಬಿ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಕೋಲ್ಕತ್ತಾದಲ್ಲಿ ಬಂಧಿಸಿದ್ದಾರೆ.
ಹಾಂಗ್ ಕಾಂಗ್ ನಿಂದ ಆಗಮಿಸಿದ್ದ ದೀಪಕ್ ಕುಲಕರ್ಣಿ ಎನ್ನುವವರನ್ನು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಕುಲಕರ್ಣಿ ಅವರ ಬಂಧನವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಂಗಳವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ನಿರೀಕ್ಷೆ ಇದ್ದು ಈ ವೇಳೆ ಪ್ರಕರಣ ದಾಖಲಾಗಿರುವ ಮುಂಬೈಗೆ ಈತನ ಸ್ಥಳಾಂತರಕ್ಕೆ ಅಧಿಕಾರಿಗಳು ನ್ಯಾಯಾಲಯವನ್ನು ಕೋರಲಿದ್ದಾರೆ ಎಂದು ತಿಳಿದು ಬಂದಿದೆ.
ಕುಲಕರ್ಣಿ ಪ್ರಕರಣದ ಮುಖ್ಯ ಆರೋಪಿಯಾದ ಚೋಕ್ಸಿಯ ಸಾಗರೋತ್ತರ ವ್ಯವಹಾರಗಳ ಜತೆ ಸಂಬಂಧ ಹೊಂದಿದ್ದರು.ಇಡಿ ಅವರ ವಿರುದ್ಧ ಲುಕ್ ಔಟ್ ಸರ್ಕ್ಯುಲರ್ ಹೊರಡಿಸಿತ್ತು ಎಂದು ಅಧಿಕಾರಿಗಳು ಹೇಳಿದರು, ಚೋಕ್ಸಿಗೆ ಸಂಬಂಧಿಸಿರುವ ಹಾಂಗ್ ಕಾಂಗ್ ನಲ್ಲಿದ್ದ "ಡಮ್ಮಿ" ಸಂಸ್ಥೆಯೊಂದರಲ್ಲಿ ಅವರು ನಿರ್ದೇಶಕರಾಗಿದ್ದರು ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


