ಬಿಜೆಪಿ ಮುಸ್ಲಿಂ ಮುಕ್ತ ಭಾರತ ಮಾಡಲು ಹೊರಟಿದೆ: ಅಸಾದುದ್ದೀನ್ ಓವೈಸಿ
ಬಿಜೆಪಿ ಮುಸ್ಲಿಂ ಮುಕ್ತ ಭಾರತ ಮಾಡಲು ಹೊರಟಿದೆ ಎಂದು ಸಂಸದ ಅಸಾದುದ್ದೀನ್ ಓವೈಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...

Published On :
ಹೈದರಾಬಾದ್: ಬಿಜೆಪಿ ಮುಸ್ಲಿಂ ಮುಕ್ತ ಭಾರತ ಮಾಡಲು ಹೊರಟಿದೆ ಎಂದು ಸಂಸದ ಅಸಾದುದ್ದೀನ್ ಓವೈಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತೆಲಂಗಾಣ ವಿಧಾನಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಓವೈಸಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತದಲ್ಲಿ ಅಲ್ಪಸಂಖ್ಯಾತ ಸಮುದಾಯದವರನ್ನು ಬೆದರಿಸುವ ಪ್ರಯತ್ನ ನಡೆಸುತ್ತಿದ್ದು ಬಿಜೆಪಿ ಮುಸ್ಲಿಂ ಮುಕ್ತ ಭಾರತ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇತ್ತೀಚೆಗೆ ತೆಲಂಗಾಣಕ್ಕೆ ಭೇಟಿ ನೀಡಿದ್ದಾಗ ಮಜ್ಲಿಸ್ ಮುಕ್ತ ಹೈದರಾಬಾದ್ ಮಾಡುತ್ತೇನೆ ಎಂದಿದ್ದರು. ಅಮಿತ್ ಶಾ ಜೀ... ನೀವು ಮಜ್ಲಿಸ್ ಮುಕ್ತ ಮಾಡುವ ಧ್ಯೇಯ ಹೊಂದಿಲ್ಲ. ಬದಲಿಗೆ ಮುಸ್ಲಿಂ ಮುಕ್ತ ಭಾರತ ಮಾಡುವ ಧ್ಯೇಯ ಹೊಂದಿದ್ದೀರಾ ಎಂದು ಓವೈಸಿ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿbjpಬಿಜೆಪಿindiaಭಾರತAmit Shahಅಮಿತ್ ಶಾಮುಸ್ಲಿಂMuslimsAsaduddin Owaisiಅಸಾಸುದ್ದೀನ್ ಓವೈಸಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


