ದೇಶ

ಪ್ರಧಾನಿ ಮೋದಿ ಏಕೆ ಒಮ್ಮೆಯೂ ಅಯೋಧ್ಯೆಗೆ ಭೇಟಿ ನೀಡಿಲ್ಲ: ಶಿವಸೇನೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಜಾರಿಗೆ ತರುವ ಹಿಂದೂ ಸಂಘಟನೆಗಳ ಬೇಡಿಕೆಗೆ ದನಿಗೂಡಿಸಿರುವ ಬಿಜೆಪಿ ಪಕ್ಷ, ರಾಮ ಮಂದಿರ ನಿರ್ಮಾಣ ವಿಚಾರವಾಗಿ ಪ್ರಧಾನಿ ನರೆಂದ್ರ ಮೋದಿ ವಿರುದ್ಧ

ಪ್ರಧಾನಿ ಮೋದಿ ಏಕೆ ಒಮ್ಮೆಯೂ ಅಯೋಧ್ಯೆಗೆ ಭೇಟಿ ನೀಡಿಲ್ಲ:  ಶಿವಸೇನೆ
Narendra Modi
Published On :
ಮುಂಬೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಜಾರಿಗೆ ತರುವ ಹಿಂದೂ ಸಂಘಟನೆಗಳ ಬೇಡಿಕೆಗೆ ದನಿಗೂಡಿಸಿರುವ ಬಿಜೆಪಿ ಪಕ್ಷ, ರಾಮ ಮಂದಿರ ನಿರ್ಮಾಣ ವಿಚಾರವಾಗಿ ಪ್ರಧಾನಿ ನರೆಂದ್ರ ಮೋದಿ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದೆ. 
ನರೇಂದ್ರ ಮೋದಿ 2014 ರ ಚುನಾವಣೆಯಲಿ ರಾಮನ ಹೆಸರಿನಲ್ಲಿ ಚುನಾವಣೆ ಗೆದ್ದರು, ಈ ವರೆಗೂ ಕೇದಾರನಾಥಕ್ಕೆ ಮೂರು ಬಾರಿ ಭೆಟಿ ನೀಡಿದ್ದಾರೆ, ಅವರ ಲೋಕಸಭಾ ಕ್ಷೇತ್ರ ವಾರಣಾಸಿಗೂ ಹಲವು ಬಾರಿ ಭೇಟಿ ನೀಡಿದ್ದಾರೆ. ವಿದೇಶಗಳ ಪ್ರವಾಸದಲ್ಲಿ ಮಸೀದಿಗಳಿಗೂ ಭೇಟಿ ನೀಡಿದ್ದಾರೆ. ಆದರೆ ರಾಮಜನ್ಮಭೂಮಿಗೆ ಒಮ್ಮೆಯೂ ಭೇಟಿ ನೀಡಿ ಪೂಜೆ ಸಲ್ಲಿಸಿಲ್ಲ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಪ್ರಕಟಿಸಿರುವ ಲೇಖನದಲ್ಲಿ ತಿಳಿಸಿದೆ. 
ಪ್ರಧಾನಿಗೆ ಅಯೋಧ್ಯೆ ಹಾಗೂ ರಾಮನ ಬಗ್ಗೆ ನೆನಪೇ ಇಲ್ಲವೇ ಎಂದು ಶಿವಸೇನೆ ಪ್ರಶ್ನಿಸಿದ್ದು, ನರೇಂದ್ರ ಮೋದಿ ಸರ್ಕಾರಕ್ಕೆ ಸೌದಿ ಅರೇಬಿಯಾದಲ್ಲಿ ದೇವಾಲಯ ನಿರ್ಮಾಣ ಮಾಡುವುದಕ್ಕೆ ಸಾಧ್ಯವಾಗುತ್ತದೆ ಆದರೆ ಭಾರತದಲ್ಲಿ ನಿರ್ಮಾಣ ಮಾಡುವುದಕ್ಕೆ ಏಕೆ ಸಾಧ್ಯವಾಗುವುದಿಲ್ಲ ಎಂದು ಕೇಳಿದೆ. 
ಸುಪ್ರೀಂ ಕೋರ್ಟ್ ರಾಮಜನ್ಮಭೂಮಿ ವಿಷಯದ ವಿವಾದದ ಪ್ರಕರಣದ ವಿಚಾರಣೆಯನ್ನು 2019 ಕ್ಕೆ ಮುಂದೂಡಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಜಾರಿಗೆ ತರುವುದಕ್ಕೆ ಹಿಂದೂ ಸಂಘಟನೆಗಳು ಬೇಡಿಕೆ ಮುಂದಿಟ್ಟಿದ್ದವು. ಈ ಬೆನ್ನಲ್ಲೇ ಶಿವಸೇನೆ ಸಹ ಪ್ರಧಾನಿಯನ್ನು ಪ್ರಶ್ನಿಸಿ ರಾಮ ಮಂದಿರವನ್ನು ಮರೆತಿರಾ ಎಂದು ಪ್ರಶ್ನಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.