ದೇಶ

ತೆಲಂಗಾಣ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಪ್ರತಿ ವರ್ಷ 1 ಲಕ್ಷ ಉಚಿತ ಹಸು ನೀಡುವ ಭರವಸೆ

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ತನ್ನ ಚುನಾವಣಾ...

ತೆಲಂಗಾಣ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಪ್ರತಿ ವರ್ಷ 1 ಲಕ್ಷ ಉಚಿತ ಹಸು ನೀಡುವ ಭರವಸೆ
ಸಾಂದರ್ಭಿಕ ಚಿತ್ರ
Published On :
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರತಿ ವರ್ಷ 1 ಲಕ್ಷ ಹಸುಗಳನ್ನು ಉಚಿತವಾಗಿ ನೀಡುವ ಭರವಸೆ ನೀಡುತ್ತಿದೆ.
ಗ್ರಾಮಗಳಲ್ಲಿ ಹಬ್ಬದ ಸಂದರ್ಭಗಳಲ್ಲಿ ಹಾಗೂ ಇತರೆ ವಿಶೇಷ ಸಂದರ್ಭಗಳಲ್ಲಿ ಜನತೆಗೆ ಉಚಿವಾಗಿ ಹಸುಗಳನ್ನು ನೀಡುವ ಪ್ರಸ್ತಾಪ ಇದೆ ಎಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎನ್ ವಿಎಸ್ ಎಸ್ ಪ್ರಭಾಕರ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಕೃಷಿಯಲ್ಲಿ ಮತ್ತು ಬಡವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಸುಗಳ ಪಾತ್ರ ಬಹಳ ಮುಖ್ಯ ಎಂದ ಪ್ರಭಾಕರ್ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 'ಮಿನಿ-ಇಂಡಿಯಾ ಭಾಷಾ ಕಲ್ಯಾಣ ಮಂಡಳಿ' ಸ್ಥಾಪಿಸುವ ಪ್ರಸ್ತಾಪವೂ ಪ್ರಣಾಳಿಯಲ್ಲಿದೆ ಎಂದರು.
ತೆಲಂಗಾಣದಲ್ಲಿ ಬಿಜೆಪಿ ಪ್ರಣಾಳಿಕೆ ಮುಂದಿನ ವಾರ ಅಧಿಕೃತವಾಗಿ ಬಿಡುಗಡೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.