ಆಂಧ್ರ ಸಚಿವ ಸಂಪುಟ ವಿಸ್ತರಣೆ, ನಾಯ್ಡು ಸಂಪುಟಕ್ಕೆ ಹೊಸದಾಗಿ ಇಬ್ಬರು ಸೇರ್ಪಡೆ
ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಭಾನುವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು....

Published On :
ಅಮರಾವತಿ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಭಾನುವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಟಿಡಿಪಿ ಹಿರಿಯ ನಾಯಕ ಎನ್ ಎಂಡಿ ಫಾರೂಖ್ ಹಾಗೂ ಶಾಸಕ ಕಿದಾರಿ ಶ್ರವಣ್ ಕುಮಾರ್ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ಅಮರಾವತಿಯ ಉಂಡಾವಲ್ಲಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಇಎಲ್ ಎಲ್ ನರಸಿಂಹನ್ ಅವರು ಇಬ್ಬರು ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡ ನಂತರ ನಾಯ್ಡು ಸಂಪುಟದ ಇಬ್ಬರು ಬಿಜೆಪಿ ಸಚಿವರು ರಾಜಿನಾಮೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


