ದೇಶ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ಗೆ ನಿಷೇಧ!

ಚುನಾವಣಾ ಕಣ ಮಧ್ಯಪ್ರದೇಶದಲ್ಲಿ ಹೊಸ ವಿವಾದವೊಂದನ್ನು ಕಾಂಗ್ರೆಸ್ ಸೃಷ್ಟಿಸಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ನ್ನು ನಿಷೇಧಿಸುವುದಾಗಿ ಘೋಷಣೆ ಮಾಡಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ಗೆ ನಿಷೇಧ!
Congress President Rahul Gandhi
Published On :
ಭೋಪಾಲ್: ಚುನಾವಣಾ ಕಣ ಮಧ್ಯಪ್ರದೇಶದಲ್ಲಿ ಹೊಸ ವಿವಾದವೊಂದನ್ನು ಕಾಂಗ್ರೆಸ್ ಸೃಷ್ಟಿಸಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ನ್ನು ನಿಷೇಧಿಸುವುದಾಗಿ ಘೋಷಣೆ ಮಾಡಿದೆ. 
ಸುಮಾರು 15 ವರ್ಷಗಳಿಂದ ಕಾಂಗ್ರೆಸ್ ನ್ನು ಮಧ್ಯಪ್ರದೇಶದ ಜನತೆ ಅಧಿಕಾರದಿಂದ ದೂರವಿಟ್ಟಿದ್ದು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ಶಾಖೆಗಳನ್ನು ನಿಷೇಧಿಸಿ, ರಾಜ್ಯ ಸರ್ಕಾರಿ ನೌಕರರು ಆರ್ ಎಸ್ಎಸ್ ಶಾಖೆಗಳಿಗೆ ತೆರಳದಂತೆ ನಿರ್ಬಂಧ ವಿಧಿಸುವುದಾಗಿ ಕಾಂಗ್ರೆಸ್ ಹೇಳಿದೆ. 
ಪ್ರತಿ ಬಾರಿಯೂ ಆರ್ ಎಸ್ಎಸ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿವಾದವನ್ನು ಮೈಮೇಲೆಳೆದುಕೊಳ್ಳುತ್ತಿದ್ದು, ಈ ಹಿಂದೆ ಗಾಂಧಿ ಹತ್ಯೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರ್ ಎಸ್ಎಸ್ ವಿರುದ್ಧ ಆರೋಪ ಮಾಡಿ ವಿವಾದ ಉಂಟುಮಾಡಿದ್ದರು. 
ಈಗ ಮಧ್ಯಪ್ರದೇಶದಲ್ಲಿ ಚುನಾವಣೆ ಗೆದ್ದರೆ ಆರ್ ಎಸ್ಎಸ್ ಶಾಖೆಗಳನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಹೇಳಿದ್ದು, ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಈ ಹೇಳಿಕೆಯಿಂದ ಕಾಂಗ್ರೆಸ್ ಮನಸ್ಥಿತಿ ಬಯಲಾಗಿದ್ದು, ಕಾಂಗ್ರೆಸ್ ಮಂದಿರ ನಿರ್ಮಾಣಕ್ಕೂ ಅವಕಾಶ ನೀಡುವುದಿಲ್ಲ. ಶಾಖೆಗಳನ್ನೂ ನಡೆಸುವುದಕ್ಕೆ ಬಿಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.