ಡಿಎಂಕೆ ಬಿಟ್ಟು ಇತರೆ ಯಾವ ಪಕ್ಷದೊಂದಿಗೂ ಕೈಜೋಡಿಸಲ್ಲ: ಕಾಂಗ್ರೆಸ್
ತಮಿಳುನಾಡಿನಲ್ಲಿ ದೀರ್ಘಕಾಲದ ಮಿತ್ರ ಪಕ್ಷ ಡಿಎಂಕೆ ಬಿಟ್ಟು ಇತರೆ ಯಾವ ಪಕ್ಷದೊಂದಿಗೂ ಕೈಜೋಡಿಸುವ ಪ್ರಶ್ನೆಯೇ ಇಲ್ಲ...

Published On :
ಚೆನ್ನೈ: ತಮಿಳುನಾಡಿನಲ್ಲಿ ದೀರ್ಘಕಾಲದ ಮಿತ್ರ ಪಕ್ಷ ಡಿಎಂಕೆ ಬಿಟ್ಟು ಇತರೆ ಯಾವ ಪಕ್ಷದೊಂದಿಗೂ ಕೈಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಭಾನುವಾರ ಸ್ಪಷ್ಟಪಡಿಸಿದೆ.
ನಿನ್ನೆಯಷ್ಟೇ ಖ್ಯಾತ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರು, ಡಿಎಂಕೆ ಜೊತೆ ಮೈತ್ರಿ ಮುರಿದುಕೊಳ್ಳುವುದಾದರೆ ನಮ್ಮೊಂದಿಗೆ ಕೈಜೋಡಿಸಿ ಎಂದು ಕಾಂಗ್ರೆಸ್ ಗೆ ಆಹ್ವಾನ ನೀಡಿದ್ದರು.
ಇಂದು ಕಮಲ್ ಹಾಸನ್ ಆಹ್ವಾನಕ್ಕೆ ಪ್ರತಿಕ್ರಿಯಿಸಿದ ಎಐಸಿಸಿ ಕಾರ್ಯದರ್ಶಿ ಸಂಜಯ್ ದತ್ ಅವರು, ಇತರೆ ಪಕ್ಷಗಳೊಂದಿಗೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ತಮಿಳುನಾಡು ಕಾಂಗ್ರೆಸ್ ಉಸ್ತುವಾರಿಯಾಗಿರುವ ದತ್ ಅವರು ಇಂದು ಚೆನ್ನೈನಲ್ಲಿ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿ ಮಾಡಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೀಟ್ ಹಂಚಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಜೂನ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಕಮಲ್ ಹಾಸನ್ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಗೆ ಮುಕ್ತವಾಗಿರುವ ಸೂಚನೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


