ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಗಳಿಗಿಂತ ರಾಮ ಮಂದಿರವೇ ಮುಖ್ಯವಾಗಿದೆ: ಶರದ್ ಪವಾರ್
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಗ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ, ರೈತರನ್ನು ನಿರ್ಲಕ್ಷ್ಯಿಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ...

Published On :
ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಗ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ, ರೈತರನ್ನು ನಿರ್ಲಕ್ಷ್ಯಿಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ.
ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ನೀತಿ ನಿಯಮಗಳನ್ನು ರೂಪಿಸಲು ವಿಫಲವಾಗಿದೆ, ಜೊತೆಗೆ ರಾಮ ದೇವಾಲಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ ಎಂದು ದೂರಿದ್ದಾರೆ.
ದೇಶದ ಜನತೆಯ ಗಮನವನ್ನು ಬೇರೆಡೆ ಹರಿಸುವಂತೆ ಮಾಡುತ್ತಿದ್ದಾರೆ. ಸಾಲಮನ್ನಾ ಮಾಡುವುದು ಸೇರಿದಂತೆ ಸರ್ಕಾರ ಯಾವುದೇ ಸೂಕ್ತ ಯೋಜನೆ ಜಾರಿಗೆ ತಂದಿಲ್ಲ ರೈತರ ಜ್ವಲಂತ ಸಮಸ್ಯೆಗಳನ್ನು ಚರ್ಚಿಸುತ್ತಿಲ್ಲ,ಅದರ ಬದಲು ಸದಾ ರಾಮ ಮಂದಿರದ ಬಗ್ಗೆಯೇ ಚಿಂತಿಸುತ್ತಿದೆ ಎಂದು ಆಪಾದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


