ಶಬರಿಮಲೆ ವಿವಾದ: ತೀರ್ಪು ಮರುಪರಿಶೀಲನೆಗೆ 'ಸುಪ್ರೀಂ' ಒಪ್ಪಿಗೆ, ಅರ್ಜಿಗಳ ವಿಚಾರಣೆ ಜನವರಿ 22ಕ್ಕೆ
ಶಬರಿಮಲೆ ವಿವಾದಕ್ಕೆ ಸಂಬಂಧಿಸಿದ ತೀರ್ಪು ಮರು ಪರಿಶೀಲನೆಗೆ ಸುಪ್ರೀಂಕೋರ್ಟ್ ಒಪ್ಪಿದೆ.

ನವದೆಹಲಿ: ಶಬರಿಮಲೆ ವಿವಾದಕ್ಕೆ ಸಂಬಂಧಿಸಿದ ತೀರ್ಪು ಮರು ಪರಿಶೀಲನೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.
ಜನವರಿ 22 ರಂದು ದೇಗುಲದ ಒಳಗಡೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಅವಕಾಶ ಕಲ್ಪಿಸುವ ತೀರ್ಪು ವಿರೋಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಹೇಳಿದೆ.
ಮುಖ್ಯ ನ್ಯಾಯಾಧೀಶ ರಂಜನ್ ಗೋಗಯ್ ನೇತೃತ್ವದಲ್ಲಿನ ನ್ಯಾಯಮೂರ್ತಿಗಳಾದ ಎನ್. ನಾರಿಮನ್, ಎ. ಎಂ. ಖನ್ವೀಲ್ ಕರ್, ಡಿ. ವೈ ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರಾ ಅವರನ್ನೊಳಗೊಂಡ ಪೀಠದಿಂದ 49 ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆ ನಡೆಯಲಿದೆ.
10 ರಿಂದ 50 ವರ್ಷದೊಳಗಿನ ಮಹಿಳೆಯರು ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಲು ಅವಕಾಶ ನೀಡಿ ಸೆಪ್ಟೆಂಬರ್ 28 ರಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಪುನರ್ ಪರಿಶೀಲನೆಗಾಗಿ ಉನ್ನತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ
ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠದಲ್ಲಿ 4:1 ರ ಅನುಪಾನದಲ್ಲಿ ಎಲ್ಲಾ ಮಹಿಳೆಯರಿಗೂ ಶಬರಿಮಲೆ ಪ್ರವೇಶ ಕಲ್ಪಿಸುವ ತೀರ್ಪು ಪ್ರಕಟಿಸಲಾಗಿತ್ತು.
ಆದಾಗ್ಯೂ, ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಅಯ್ಯಪ್ಪ ಭಕ್ತಾಧಿಗಳು ಹಾಗೂ ಬಲಪಂಥೀಯ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು .
ಇಬ್ಬರು ಪತ್ರಕರ್ತೆಯರೂ ಸೇರಿದಂತೆ ಒಟ್ಟು 14 ಮಹಿಳೆಯರು ಪೊಲೀಸರ ಭದ್ರತೆಯಲ್ಲಿ ದೇಗುಲ ಪ್ರವೇಶಿಸಲು ಯತ್ನಿಸಿದರಾದರೂ ಮಧ್ಯದಾರಿಯಲ್ಲಿಯೇ ಅವರನ್ನು ತಡೆದ ಭಕ್ತಾಧಿಗಳು ಬಲವಂತದಿಂದ ಹಿಂದಕ್ಕೆ ಕಳುಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


