ದೇಶ

ಸುಕ್ಮಾ ಎನ್'ಕೌಂಟರ್: 2 ಶಂಕಿತ ನಕ್ಸಲರ ಬಂಧನ

ಛತ್ತೀಸ್ಗಢದ ಸುಕ್ಮಾ ದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್'ಕೌಂಟರ್ ನಲ್ಲಿ ಇಬ್ಬರು ಶಂಕಿತ ನಕ್ಸಲರನ್ನು ಬಂಧನಕ್ಕೊಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ...

ಸುಕ್ಮಾ ಎನ್'ಕೌಂಟರ್: 2 ಶಂಕಿತ ನಕ್ಸಲರ ಬಂಧನ
ಸಂಗ್ರಹ ಚಿತ್ರ
Published On :
ಸುಕ್ಮಾ: ಛತ್ತೀಸ್ಗಢದ ಸುಕ್ಮಾ ದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್'ಕೌಂಟರ್ ನಲ್ಲಿ ಇಬ್ಬರು ಶಂಕಿತ ನಕ್ಸಲರನ್ನು ಬಂಧನಕ್ಕೊಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ. 
ನಿನ್ನೆಯಷ್ಟೇ ಸುಕ್ಮಾದಲ್ಲಿ ಭದ್ರತಾಪಡೆಗಳು ಎನ್'ಕೌಂಟರ್ ನಡೆಸಿತ್ತು. ಈ ವೇಳೆ ಇಬ್ಬರು ನಕ್ಸಲರನ್ನು ಹತ್ಯೆ ಮಾಡಿತ್ತು. 
ಬಂಧಿತಕ್ಕೊಳಗಾಗಿರುವ ನಕ್ಸಲರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಪುಷ್ಪಪಾಲ್ ಪೊಲೀಸ್ ಠಾಣೆ ಬಳಿ ಗ್ರಾಮವೊಂದರ ಅರಣ್ಯ ಪ್ರದೇಶ ಸಮೀದ ಮೀಸಲು ಪಡೆ ಸಿಬ್ಬಂದಿ ಚುನಾವಣಾ ಕರ್ತವ್ಯ ಮುಗಿಸಿ ವಾಪಸ್ಸಾಗುತ್ತಿತ್ತು. ಈ ವೇಳೆ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಗುಂಡಿನ ಚಕಮಕಿ ನಿಂತ ಬಳಿಕ ಇಬ್ಬರು ನಕ್ಸಲರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಇಬ್ಬರು ನಕ್ಸಲರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.