ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ಮರಣಾ 75 ರೂಪಾಯಿ ಮುಖಬೆಲೆಯ ನಾಣ್ಯ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಮೊದಲ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿ 75 ವರ್ಷಗಳು ಸಂದಿವೆ. ಇದರ ಸ್ಮರಣಾರ್ಥವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಹೊರತರುವುದಾಗಿ ಕೇಂದ್ರ ಸರ್ಕಾರ

Published On :
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಮೊದಲ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿ 75 ವರ್ಷಗಳು ಸಂದಿವೆ. ಇದರ ಸ್ಮರಣಾರ್ಥವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಹೊರತರುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
ಪೋರ್ಟ್ ಬ್ಲೈರ್ (ಅಂಡಮಾನ್ ಮತ್ತು ನಿಕೋಬಾರ್ ಐಸ್‌ಲ್ಯಾಂಡ್) ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸರು 1943 ರ ಡಿಸೆಂಬರ್ 30 ರಂದು ಮೊದಲ ಬಾರಿಗೆ ತ್ರಿವರ್ಣ ಧ್ವಜಾರೋಹಣ ಮಾಡಿದ್ದರು. ಈ ಘಟನೆಗೆ 75 ವರ್ಶಗಳು ಸಂದಿದ್ದು ಈ ಹಿನ್ನೆಲೆಯಲ್ಲಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಹೊರತರಲಾಗುತ್ತಿದೆ, 75 ರೂಪಾಯಿ ಮುಖಬೆಲೆ ನಾಣ್ಯ ಹೊರತರುವುದಕ್ಕಾಗಿ ಈಗಾಗಲೇ ಹಣಕಾಸು ಇಲಾಖೆ ಅಧಿಸೂಚನೆ ಹೊರಡಿಸಿದೆ
ಸೆಲ್ಯುಲರ್ ಜೈಲ್ ನ ಮುಂಭಾಗದಲ್ಲಿ ನೇತಾಜಿ ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್ ಮಾಡುತ್ತಿರುವ ಚಿತ್ರ ನಾಣ್ಯದ ಮೇಲೆ ಇರಲಿದೆ. ಅ.21 ರಂದು ರ್ಪಧಾನಿ ನರೇಂದ್ರ ಮೋದಿ ಆಜಾದ್ ಹಿಂದ್ ಸರ್ಕಾರ ರಚನೆಯಾದ 75 ನೇ ವರ್ಷಾಚರಣೆ ಅಂಗವಾಗಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Subhash Chandra Boseಸುಭಾಷ್ ಚಂದ್ರ ಬೋಸ್Tricolourತ್ರಿವರ್ಣ ಧ್ವಜRs 75 Commemorative coin75 ರೂ ಮುಖಬೆಲೆ ನಾಣ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


