ಡಿ.11ರಿಂದ ಜ.8ರವರೆಗೆ ಚಳಿಗಾಲದ ಅಧಿವೇಶನಕ್ಕೆ ಕ್ಯಾಬಿನೆಟ್ ಸಮಿತಿ ಶಿಫಾರಸು
ಈ ಸಾಲಿನ ಸಂಸ್ತ್ತು ಚಳಿಗಾಲದ ಅಧಿವೇಶನವು ಡಿಸೆಂಬರ್ 11ರಿಂದ ಜನವರಿ 8ರ ವರೆಗೆ ನಡೆಸುವಂತೆ ಸಂಸದೀಯ ವ್ಯವಹಾರಗಳ ನಿರ್ವಹಣೆಯ ಕ್ಯಾಬಿನೆಟ್ ಸಮಿತಿ (ಸಿಸಿಪಿಎ) ಶಿಫಾರಸು ಮಾಡಿದೆ

Published On :
ನವದೆಹಲಿ: ಈ ಸಾಲಿನ ಸಂಸ್ತ್ತು ಚಳಿಗಾಲದ ಅಧಿವೇಶನವು ಡಿಸೆಂಬರ್ 11ರಿಂದ ಜನವರಿ 8ರ ವರೆಗೆ ನಡೆಸುವಂತೆ ಸಂಸದೀಯ ವ್ಯವಹಾರಗಳ ನಿರ್ವಹಣೆಯ ಕ್ಯಾಬಿನೆಟ್ ಸಮಿತಿ (ಸಿಸಿಪಿಎ) ಶಿಫಾರಸು ಮಾಡಿದೆ
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಿಸಿಪಿಎ ಮಂಗಳವಾರ ರಾತ್ರಿ ಸಿಂಗ್ ನಿವಾಸದಲ್ಲಿ ಸೇರಿದ್ದ ಸಭೆಯ ವೇಳೆ ಈ ಸಂಬಂಧ ಚರ್ಚೆ ನಡೆಸಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನ ಸಾಮಾನ್ಯವಾಗಿ ನವೆಂಬರ್ ನಲ್ಲಿ ಪ್ರಾರಂಭವಾಗುತ್ತಿತ್ತು. ಆದರೆ ಈ ಬಾರಿ ಡಿಸೆಂಬರ್ ನಲ್ಲಿ ಪ್ರಾರಂಭವಾಗಲಿದೆ. ರಾಜಸ್ಥಾನ, ಮಧ್ಯ ಪ್ರದೇಶ ಸೇರಿ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯುತ್ತಿರುವ ಕಾರಣದಿಂದ ಅಧಿವೇಶನ ವಿಳಂಬವಾಗಿದೆ ಎಂದು ಅಧಿಕೃತ ಮೂಲಗಳು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CCPAಸಂಸತ್ತಿನ ಚಳಿಗಾಲದ ಅಧಿವೇಶನParliament winter sessionCabinet Committee on Parliamentary Affairsಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಸಿಸಿಪಿಎ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


