ದೇಶ

ಕೇರಳ ತಲುಪಿದ ತೃಪ್ತಿ ದೇಸಾಯಿ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾಕಾರರಿಂದ ದಿಗ್ಬಂಧನ

ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಶಬರಿಮಲೆ ದೇಗುಲಕ್ಕೆ ತೆರಳುವ ಸಲುವಾಗಿ ಇಂದು ಮುಂಜಾನೆ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದಾರೆ, ಆದರೆ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ

ಕೇರಳ ತಲುಪಿದ ತೃಪ್ತಿ ದೇಸಾಯಿ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾಕಾರರಿಂದ ದಿಗ್ಬಂಧನ
ತೃಪ್ತಿ ದೇಸಾಯಿ(ಸಂಗ್ರಹ ಚಿತ್ರ)
Published On :
ಕೊಚ್ಚಿ: ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಶಬರಿಮಲೆ ದೇಗುಲಕ್ಕೆ ತೆರಳುವ ಸಲುವಾಗಿ ಇಂದು ಮುಂಜಾನೆ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದಾರೆ, ಆದರೆ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರು ಏರ್ ಪೋರ್ಟ್ ನಿಂದ ಹೊರಗೆ ಬರಲು ಸಾಧ್ಯವಾಗಿಲ್ಲ.
ಬೆಳಗ್ಗೆ 4.40ಕ್ಕೆ ಪುಣೆಯಿಂದ ಆಗಮಿಸಿರುವ ತೃಪ್ತಿ ಮತ್ತವರ ತಂಡ ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣದಿಂದ ಹೊರಗೆ ಹೋಗಲು ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿರುವುದರಿಂದ ವಿಮಾನ ನಿಲ್ದಾಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸೆಪ್ಟೇಬರ್ 28 ರಂದು ಕೋರ್ಟ್ ಅಂತಿಮ ತೀರ್ಪು ನೀಡಿದ ನಂತರ ಮೂರನೇ ಬಾರಿಗೆ ಅಯ್ಯಪ್ಪ ದೇವಾಲಯದ ಬಾಗಿಲು ತೆರೆಯಲಾಗುತ್ತಿದೆ.ಪ್ರತಿಭಟನಾಕರರು ಹಿಂಸಾಚಾರಕ್ಕಿಳಿಯಬಾರದು, ಒಮ್ಮೆ ನಾವು ಅಲ್ಲಿ ತಲುಪಿದರೇ ನಮಗೆ ಯಾವ ರೀತಿಯ ಭದ್ರತೆ ನಮಗೆ ನೀಡಿದ್ದಾರೆ ಎಂಬುದು ತಿಳಿಯುತ್ತದೆ. ಒಂದು ವೇಳೆ ನಮಗೆ ಭದ್ರತೆ ನೀಡದಿದ್ದರೂ ನಾವು ಅಲ್ಲಿಗೆ ತೆರಳುತ್ತೇವೆ, ನನಗೆ ಹೀಗಾಗಲೇ ಹಲವು ಬೆದರಿಕೆ ಕರೆಗಳು ಬಂದಿವೆ,ಹೀಗಾಗಿ ನನ್ನ ಮೇಲೆ ದಾಳಿ ನಡೆಯಬಹುದು, ಆದರೆ ಯಾವುದೇ ಕಾರಣಕ್ಕೂ ಅಯ್ಯಪ್ಪ ದರ್ಶನ ಪಡೆಯದೇ ವಾಪಸ್ ಮಹಾರಾಷ್ಟ್ರಕ್ಕೆ ತೆರಳುವುದಿಲ್ಲ ಎಂದು ತೃಪ್ತಿ ದೇಸಾಯಿ ಹೇಳಿದ್ದಾರೆ.
ಇನ್ನೂ ತೃಪ್ತಿ ದೇಸಾಯಿ ಶಬರಿಮಲೆ ದೇವಾಲಯ ಪ್ರವೇಶಿಸುವುದಕ್ಕೆ ವಿರೋಧ ವ್ಯಕ್ತ ಪಡಿಸಿರುವ ಏರ್ ಪೋರ್ಟ್ ಟ್ಯಾಕ್ಸಿ ಚಾಲಕರು, ತಾವು ಯಾವುದೇ ಕಾರಣಕ್ಕೂ ತೃಪ್ತಿ ದೇಸಾಯಿ ಶಬರಿಮಲೆ ತೆರಳಲು ಬಿಡವುದಿಲ್ಲ, ತಮ್ಮ ಸ್ವಂತ ವಾಹನದಲ್ಲಿ ಅಥವಾ ಪೊಲೀಸ್ ವಾಹನದಲ್ಲಿ ತೆರಳಲಿ ಎಂದು ಹೇಳಿದ್ದಾರೆ.
ಶತಮಾನಗಳಷ್ಟು ಹಿಂದಿನ ಸಂಪ್ರದಾಯವನ್ನ ಮುರಿಯಲು ತೃಪ್ತಿ ದೇಸಾಯಿ ಮತ್ತವರ ತಂಡ ಬಂದಿದೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ಮುಂದುವರಿಸಿರುವ ಸ್ಥಳೀಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ತೃಪ್ತಿ ದೇಸಾಯಿ ಅಯ್ಯಪ್ಪ ದರ್ಶನ ಪಡೆಯುತ್ತಿಲ್ಲ, ಇಲ್ಲಿನ ಶಾಂತಿ ನೆಮ್ಮದಿ ಕೆಡಿಸಲು ಬರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.