ಚಂದ್ರಬಾಬು ನಾಯ್ಡು ನಂತರ, ಸಿಬಿಐಗೆ ಗೇಟ್ ಪಾಸ್ ನೀಡಿದ ದೀದಿ
ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತಮ್ಮ ರಾಜ್ಯದಲ್ಲಿ ಸಿಬಿಐ ತನಿಖೆಗೆ ಕೆಂಪು ಬಾವುಟ ತೋರಿಸಿದ...

Published On :
ನವದೆಹಲಿ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತಮ್ಮ ರಾಜ್ಯದಲ್ಲಿ ಸಿಬಿಐ ತನಿಖೆಗೆ ಕೆಂಪು ಬಾವುಟ ತೋರಿಸಿದ ಕೆಲವೇ ಗಂಟೆಗಳಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಕೇಂದ್ರೀಯ ತನಿಖಾ ಸಂಸ್ಥೆಗೆ ರಾಜ್ಯದಿಂದ ಗೇಟ್ ಪಾಸ್ ನೀಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ತನಿಖೆ ನಡೆಸುವುದಕ್ಕಾಗಿ ಸಿಬಿಐಗೆ ನೀಡಲಾಗಿದ್ದ 'ಮುಕ್ತ ಸಮ್ಮತಿ'ಯನ್ನು ಮಮತಾ ಬ್ಯಾನರ್ಜಿ ಸರ್ಕಾರ ವಾಪಸ್ ಪಡೆದಿದೆ. ಈ ಮೂಲಕ ಸಿಬಿಐ ಅಧಿಕಾರಿಗಳು ರಾಜ್ಯ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.
ಪಶ್ಚಿಮ ಬಂಗಾಳ ಸರ್ಕಾರ 1989ರಲ್ಲಿ ಸಿಬಿಐಗೆ ತನಿಖೆಗೆ 'ಮುಕ್ತ ಸಮ್ಮತಿ' ಆದೇಶ ನೀಡಿತ್ತು. ಈಗ ಅದನ್ನು ದೀದಿ ಸರ್ಕಾರ ಹಿಂಪಡೆದಿದೆ.
ಇಂದು ಬೆಳಗ್ಗೆಯಷ್ಟೇ 'ಮುಕ್ತ ಸಮ್ಮತಿ' ಹಿಂಪಡೆದ ಚಂದ್ರಬಾಬು ನಾಯ್ಡು ನಿರ್ಧಾರವನ್ನು ಸ್ವಾಗತಿಸಿದ್ದ ಮಮತಾ ಬ್ಯಾನರ್ಜಿ, ಆಂಧ್ರ ಸಿಎಂ ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದ್ದಾರೆ. ಸಿಬಿಐ ಬಿಜೆಪಿ ಸರ್ಕಾರದ ಸೂಚನೆಗಳನ್ನು ಪಡೆದು ಕೆಲಸ ಮಾಡುತ್ತಿದೆ ಎಂದು ದೂರಿದ್ದರು.
1946ರ ದೆಹಲಿ ವಿಶೇಷ ಪೊಲೀಸ್ ಸಂಸ್ಥೆ ಕಾಯ್ದೆ ಅಡಿ ಸಿಬಿಐ ಕಾರ್ಯನಿರ್ವಹಿಸುತ್ತಿದ್ದು, ಈ ಕಾಯ್ದೆ ಪ್ರಕಾರ ದೆಹಲಿಯ ಹೊರಗೆ ತನಿಖೆ ನಡೆಸಲು ಆಯಾ ರಾಜ್ಯಗಳ ಅನುಮತಿ ಪಡೆದುಕೊಳ್ಳಬೇಕು. ಇದಕ್ಕಾಗಿ ರಾಜ್ಯಗಳು ಸಿಬಿಐಗೆ 'ಮುಕ್ತ ಸಮ್ಮತಿ' ನೀಡುತ್ತವೆ. ಈ ಸಮ್ಮತಿಯನ್ನು ಆಂಧ್ರ ಪ್ರದೇಶ ಸರ್ಕಾರ ನವೆಂಬರ್ 8ರಂದು ವಾಪಸ್ ಪಡೆದು ಆದೇಶ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


