ಕಾಂಗ್ರೆಸ್ ನಲ್ಲಿ ನನ್ನ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿಗಳಿಲ್ಲದೇ ಮನ್ವೇಂದ್ರ ಕಣಕ್ಕೆ - ವಸುಂಧರಾ ರಾಜೆ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನನ್ನ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿಗಳಿಲ್ಲದೇ ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರ ಮಗ ಮನ್ವೇಂದ್ರ ಸಿಂಗ್ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಹೇಳಿದ್ದಾರೆ.

ಜಾಲ್ವಾರ್: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನನ್ನ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿಗಳಿಲ್ಲದೇ ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರ ಮಗ ಮನ್ವೇಂದ್ರ ಸಿಂಗ್ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಹೇಳಿದ್ದಾರೆ.
ವಸುಂಧರಾ ರಾಜೆ ವಿರುದ್ಧ ಜಾಲಾರ ಪಟ್ಟಣದಿಂದ ಕ್ಷೇತ್ರದಿಂದ ಮನ್ವೇಂದ್ರ ಸಿಂಗ್ ಅವರಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಪಕ್ಷ ಇಂದು 32 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕೆಲ ತಾಸಿನ ನಂತರ ವಸುಂಧರಾ ರಾಜೆ ಈ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಜಲ್ವಾರ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಸುಂಧರಾ, ಕಾಂಗ್ರೆಸ್ ಪಕ್ಷದಲ್ಲಿ ಸೂಕ್ತ ಅಭ್ಯರ್ಥಿಗಳಿಲ್ಲದೆ ಎಲ್ಲಿಂದಲೂ ಬಂದವರಿಗೆ ಟಿಕೆಟ್ ನೀಡಲಾಗಿದೆ. ಇಲ್ಲಿಂದ ಅವರನ್ನು ಕಳುಹಿಸಲಾಗುವುದು ಎಂದರು.
ಕಾಂಗ್ರೆಸ್ ಘೋಷಣೆ ಬಗ್ಗೆ ಪ್ರತಿಕ್ರಿಯಿಸಿರುವ ರಾಜಸ್ತಾನ ಬಿಜೆಪಿ ರಾಜ್ಯಾಧ್ಯಕ್ಷ ಮದಲ್ ಲಾಲ್ ಸೈನಿ, ಈ ನಿರ್ಧಾರ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತೆ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


