ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಸಮಯಬೇಕು: ದೇವಸ್ವಂ ಮಂಡಳಿ
ಅತ್ತ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿರುವಂತೆಯೇ ಇತ್ತ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲದ ದೇವಸ್ವಂ ಮಂಡಳಿ ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಸಮಯಬೇಕಿದೆ ಎಂದು ಹೇಳಿದೆ.

Published On :
ಕೊಚ್ಚಿ: ಅತ್ತ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿರುವಂತೆಯೇ ಇತ್ತ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲದ ದೇವಸ್ವಂ ಮಂಡಳಿ ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಸಮಯಬೇಕಿದೆ ಎಂದು ಹೇಳಿದೆ.
ಮಹಿಳಾ ಪ್ರವೇಶದ ವಿರುದ್ಧ ಹೆಚ್ಚುತ್ತಿರುವ ಜನಾಕ್ರೋಶದ ಹಿನ್ನಲೆಯಲ್ಲಿ ದೇವಸ್ವಂ ಮಂಡಳಿ ಈ ನಿರ್ಧಾರಕ್ಕೆ ಬಂದಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದು ಅಸಾಧ್ಯ ಎಂದು ಪರೋಕ್ಷವಾಗಿ ಹೇಳಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆ ಕೂಡ ಒಮ್ಮತದ ತೀರ್ಮಾನಕ್ಕೆ ಬರದೇ ವಿಫಲವಾಗಿತ್ತು. ಇದೇ ಕಾರಣಕ್ಕೆ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಪಾಲನೆಗಾಗಿ ಸಮಯಾವಕಾಶ ಕೇಳುವ ಸಾಧ್ಯತೆ ಇದೆ.
ಅಲ್ಲದೆ ಇದೇ ಗುರುವಾರದಿಂದ ಶಬರಿಮಲೆ ಯಾತ್ರೆ ಆರಂಭವಾಗಲಿದ್ದು, ಎರಡು ತಿಂಗಳ ಯಾತ್ರಾವಧಿಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವುದು ಕೇರಳ ಸರ್ಕಾರದ ಮುಂದಿರುವ ದೊಡ್ಡ ಸವಾಲಾಗಿದೆ. ಅದರ ನಡುವೆ ಮಹಿಳೆಯರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವುದರಿಂದ ಖಂಡಿತಾ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಕೇರಳ ಸರ್ಕಾರ ಈ ವಿಚಾರದಲ್ಲಿ ಹಿಂದಡಿ ಇಟ್ಟಿದೆ ಎನ್ನಲಾಗುತ್ತಿದೆ.
ಶಬರಿಮಲೆ ಕ್ರಿಯಾ ಸಮಿತಿಯಿಂದ ಇಂದು ಕೇರಳ ಬಂದ್
ಏತನ್ಮಧ್ಯೆ ಹಿಂದೂ ಐಕ್ಯವೇದಿಯ ರಾಜ್ಯಾಧ್ಯಕ್ಷರಾದ ಕೆಪಿ ಶಶಿಕಲಾ ಅವರನ್ನು ಬಂಧಿಸಿರುವ ಕೇರಳ ಪೊಲೀಸರ ನಡೆಯನ್ನು ಖಂಡಿಸಿ ಶಬರಿಮಲೆ ಕ್ರಿಯಾ ಸಮಿತಿ ಇಂದು ಕೇರಳದಾದ್ಯಂತ ಬಂದ್ ಗೆ ಕರೆ ನೀಡಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ತಮ್ಮ ಪ್ರತಿಭಟನೆಗೆ ಬೆಂಬಲ ನೀಡುವಂತೆ ಮನವಿ ಮಾಡಿದೆ. ಕಳೆದ ರಾತ್ರಿ ಸನ್ನಿಧಾನಂ ಬಳಿ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ಕೆಪಿ ಶಶಿಕಲಾ ಅವರನ್ನು ಪೊಲೀಸರು ಮರಕ್ಕೊಟ್ಟಂ ಬಳಿ ಬಂಧಿಸಿದ್ದರು.
ಹಿಂದು ಐಕ್ಯ ವೇದಿ ಸಂಘಟನೆಯ ರಾಜ್ಯ ಅಧ್ಯಕ್ಷೆ ಕೆ.ಪಿ.ಶಶಿಕಲಾ ತಮಗೆ 50ರ ಮೇಲ್ಪಟ್ಟು ವಯಸ್ಸಾಗಿದೆ ಎಂದು ಅಯ್ಯಪ್ಪ ಸ್ವಾಮಿ ದರ್ಶನಕ್ಕಾಗಿ ಇರುಮುಡಿ ಕೆಟ್ಟು ಹೊತ್ತು ನಿನ್ನೆ ರಾತ್ರಿಯೇ ಆಗಮಿಸಿದ್ದರು. ನಿಷೇಧಾಜ್ಞೆ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗ್ಗೆ 6ಗಂಟೆಯಿಂದಲೇ ಬಂದ್ಗೆ ಕರೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್ಕೊಚ್ಚಿKochiTrupti Desaiತೃಪ್ತಿ ದೇಸಾಯಿAyyappa templeಶಬರಿಮಲೆ ವಿವಾದSabarimala Rowಅಯ್ಯಪ್ಪ ದೇಗುಲ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


