ದೇಶ

ಪದಗ್ರಹಣ ಸಮಾರಂಭಕ್ಕೆ ಇಮ್ರಾನ್ ಖಾನ್ ಆಮಂತ್ರಿಸದ ಕಾರಣ ನನ್ನ ಮೇಲೆ ಮೋದಿಗೆ ಅಸೂಯೆ: ಸಿಧು

ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಆಮಂತ್ರಿಸದ ಕಾರಣ ನನ್ನ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಅಸೂಯೆ ಇದೆ ಎಂದು ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ಪದಗ್ರಹಣ ಸಮಾರಂಭಕ್ಕೆ ಇಮ್ರಾನ್ ಖಾನ್ ಆಮಂತ್ರಿಸದ ಕಾರಣ ನನ್ನ ಮೇಲೆ ಮೋದಿಗೆ ಅಸೂಯೆ: ಸಿಧು
ನವಜೋತ್ ಸಿಂಗ್ ಸಿಧು
Published On :

ರಾಯ್ ಪುರ:  ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್  ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಆಮಂತ್ರಿಸದ ಕಾರಣ ನನ್ನ ಮೇಲೆ  ಪ್ರಧಾನಿ ನರೇಂದ್ರ ಮೋದಿಗೆ ಅಸೂಯೆ ಇದೆ ಎಂದು ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ಚಂಡೀಗಢದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಧು, ನವಾಜ್ ಷರೀಫ್ ಹುಟ್ಟುಹಬ್ಬಕ್ಕೆ ಆಹ್ವಾನ ನೀಡದಿದ್ದರೂ ಹೋಗುವ ನರೇಂದ್ರ ಮೋದಿಗೆ ಇಮ್ರಾನ್ ಖಾನ್ ಪದ ಗ್ರಹಣ ಸಮಾರಂಭಕ್ಕೆ ಆಹ್ವಾನ ನೀಡದಿದ್ದಕ್ಕೆ ಹೊಟ್ಟೆ ಉರಿದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಗೋದ್ರಾ ಹತ್ಯಾಕಾಂಡದಲ್ಲಿ ತಳಕು ಹಾಕಿಕೊಂಡಿರುವ ಜನರಿಗೆ ನನ್ನ ದೇಶಭಕ್ತಿಯನ್ನು ಸಾಬೀತುಪಡಿಸುವುದಿಲ್ಲ ಎಂದು ಹೇಳಿದ ಸಿಧು, ಸರ್ಕಾರದ ವಿರುದ್ಧ ಪ್ರಶ್ನೆ ಕೇಳುವವರಿಗೆ ರಾಷ್ಟ್ರ ವಿರೋಧಿ ಎಂಬ ಹಣೆಪಟ್ಟಿ ಕಟ್ಟುವ ಮೂಲಕ  ಅವರ ಧ್ವನಿ ಅಡಗಿಸಲಾಗುತ್ತಿದೆ ಎಂದು ಕೇಂದ್ರಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ವರ್ಷದ ಆಗಸ್ಟ್ ತಿಂಗಳಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಪದಗ್ರಹಣ ಸ್ವೀಕಾರ ಸಮಾರಂಭದಲ್ಲಿ ನವಜೋತ್ ಸಿಧು ಪಾಲ್ಗೊಂಡಿದಲ್ಲದೇ, ಪಾಕಿಸ್ತಾನದ ಜನರಲ್ ಜಾವೇದ್ ಬಾಜ್ವಾ ಅವರನ್ನು ತಬ್ಬಿಕೊಳ್ಳುವ ಮೂಲಕ ದೇಶಾದ್ಯಂತ ಟೀಕೆಗೆ ಸಿಧು ಗುರಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.