ದೇಶ

ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್ ನಡೆಸಿರುವ ಭದ್ರತಾ ಪಡೆಗಳು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಸಂಗ್ರಹ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್ ನಡೆಸಿರುವ ಭದ್ರತಾ ಪಡೆಗಳು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ. 
ಶೋಪಿಯಾನ್ ಜಿಲ್ಲೆಯ ರೆಬೋನ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನಲೆಯಲ್ಲಿ ಸೇನಾಪಡೆಗಳು ಭಾರೀ ಕಾರ್ಯಾಚರಣೆಗಿಳಿದಿದ್ದವು. 
ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್'ಕೌಂಟರ್ ನಡೆಸಲು ಆರಂಭಿಸಿದ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. 
ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಎನ್'ಕೌಂಟರ್ ಸ್ಥಳದತ್ತ ಸುಳಿಯದಂತೆ ನಾಗರೀಕರಿಗೆ ಸೂಚನೆ ನೀಡಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳದಲ್ಲಿ ಸ್ಫೋಟಕ ವಸ್ತುಗಳಿರುವ ಶಂಕೆಗಳಿವೆ ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.