ರಫೇಲ್ ಕುರಿತು ನನ್ನೊಂದಿಗೆ 15 ನಿಮಿಷ ಚರ್ಚೆ ನಡೆಸಿ: ಪ್ರಧಾನಿ ಮೋದಿಗೆ ರಾಹುಲ್ ಸವಾಲ್
ರಫೇಲ್ ಯುದ್ಧ ವಿಮಾನ ಖರೀದಿ ವಿವಾದ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ರಫೇಲ್ ವಿಚಾರ ಕುರಿತು ನನ್ನೊಂದಿಗೆ...

Published On :
ಅಂಬಿಕಾಪುರ: ರಫೇಲ್ ಯುದ್ಧ ವಿಮಾನ ಖರೀದಿ ವಿವಾದ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ರಫೇಲ್ ವಿಚಾರ ಕುರಿತು ನನ್ನೊಂದಿಗೆ 15 ನಿಮಿಷ ಚರ್ಚೆ ನಡೆಸಿ ಎಂದು ಶನಿವಾರ ಸವಾಲು ಹಾಕಿದ್ದಾರೆ.
ಛತ್ತೀಸ್ಗಢ ಚುನಾವಣೆ ಹಿನ್ನಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಹಲವು ಹಗರಣಗಳು ಹಾಗೂ ಒಪ್ಪಂದ ವಿವಾದಗಳ ಕುರಿತು ನನ್ನಲ್ಲಿರುವ ಪ್ರಶ್ನೆಗಳಿಗೆ ಉತ್ತರಿಸಿರುವ ಮಟ್ಟದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಲ್ಲ. ಯಾವುದೇ ವೇದಿಕೆಯಲ್ಲಿಯೇ, ಯಾವುದೇ ಸಮಯದಲ್ಲಿಯೇ ಆದರೂ ರಫೇಲ್ ವಿವಾದ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ರಫೇಲ್ ಕುರಿತು ಮೋದಿಯವರು ನನ್ನೊಂದಿಗೆ 15 ನಿಮಿಷಗಳ ಕಾಲ ಚರ್ಚೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ.
ರಫೇಲ್ ವಿವಾದ ಕುರಿತು ಮೋದಿಯವರು 15 ನಿಮಿಷ ಚರ್ಚೆ ನಡೆಸಲಿ. ಅನಿಲ್ ಅಂಬಾನಿ, ಹೆಚ್ಎಎಲ್, ಫ್ರೆಂಚ್ ಅಧ್ಯಕ್ಷ ಹೇಳಿಕೆ ಹಾಗೂ ವಿಮಾನ ಖರೀದಿಯ ಬೆಲೆ ಕುರಿತು ನಾನು ಮಾತನಾಡುತ್ತೇನೆ. ಎಲ್ಲಾ ಒಪ್ಪಂದವನ್ನೂ ಪ್ರಧಾನಮಂತ್ರಿಗಳೇ ಮಾಡಿದ್ದಾರೆಂದು ರಕ್ಷಣಾ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ. ಪ್ರಧಾನಮಂತ್ರಿಗಳು ಪ್ರಕ್ರಿಯೆಗಳನ್ನು ಅನುಸರಿಸಿಲ್ಲ. ರಾತ್ರೋರಾತ್ರಿ ಸಿಬಿಐ ನಿರ್ದೇಶಕರನ್ನು ಅಧಿಕಾರದಿಂದ ತೆಗೆದುಹಾಕಲಾಯಿತು. ಇಷ್ಟೆಲ್ಲಾ ಆದರೂ ನನ್ನ ಪ್ರಶ್ನೆಗಳಿಗೆ ಮೋದಿಯವರು ಉತ್ತರ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.
ನೋಟು ನಿಷೇಧ ಕುರಿತಂತೆ ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಮತ್ತೆ ಪುನರುಚ್ಛರಿಸಿದ ರಾಹುಲ್, ನೋಟು ನಿಷೇಧ ನಿರ್ಧಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಉದ್ಯಮ ಕ್ಷೇತ್ರದಲ್ಲಿರುವ ಅವರ ಕೆಲ ಸ್ನೇಹಿತರಿಗೆ ಸಹಾಯಕವಾಗಿದೆ ಎಂದಿದ್ದಾರೆ.
ಬಳಿಕ ಛತ್ತೀಸ್ಗಢದ ಅವ್ಯವಸ್ಥೆ ಕುರಿತಂತೆ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದಲೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದರೂ, ಯುವಕರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ವಿಫಲರಾಗಿದ್ದಾರೆಂದು ಹೇಳಿದ್ದಾರೆ.
ರಾಜ್ಯದಲ್ಲಿ ರಮಣ್ ಸಿಂಗ್ ಅವರು 15 ವರ್ಷಗಳಿಂದ ಅಧಿಕಾರದಲ್ಲಿದ್ದಾರೆ. ಪ್ರಧಾನಿ ಮೋದಿಯವರು ನಾಲ್ಕೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವಲ್ಲಿ ಎರಡೂ ಸರ್ಕಾರಗಳು ವಿಫಲಗೊಂಡಿವೆ.
ರಾಜ್ಯದಲ್ಲಿ ಒಮ್ಮೆ ಕಾಂಗ್ರೆಸ್ ಪಕ್ಷ ಅಧಇಕಾರಕ್ಕೆ ಬಂದರೆ, ಸರ್ಕಾರದಲ್ಲಿ ಖಾಲಿಯಿರುವ ಎಲ್ಲಾ ಉದ್ಯೋಗಳನ್ನೂ ಭರ್ತಿ ಮಾಡಲಾಗುತ್ತದೆ. ಅಧಿಕಾರಕ್ಕೆ ಬಂದ 10 ದಿನಗಳೊಳಗಾಗಿ ರಾಜ್ಯ ರೈತರ ಸಾಲಗಳನ್ನು ಮನ್ನಾ ಮಾಡಲಾಗುತ್ತದೆ. ಎಲ್ಲರಿಗೂ ಬೋನಸ್ ಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


