ಅಮೃತಸರ ಸ್ಫೋಟ ಪ್ರಕರಣ: ಖಾಲಿಸ್ತಾನಿ, ಕಾಶ್ಮೀರಿ ಭಯೋತ್ಪಾದಕರ ಕೈವಾಡ ತಳ್ಳಿಹಾಕುವಂತಿಲ್ಲ-ಸಿಎಂ
ಅಮೃತಸರದ ರಾಜಸಾನ್ಸಿ ಗ್ರಾಮದಲ್ಲಿರುವ ನಿರಾನ್ಕಾರಿ ಭವನದಲ್ಲಿ ನಡೆದಿರುವ ಸ್ಫೋಟ ಭಯೋತ್ಪಾದಕ ಕೃತ್ಯವಾಗಿರುವ ಸಾಧ್ಯತೆ ಹೆಚ್ಚಾಗಿದೆ

Published On :
ಅಮೃತಸರದ ರಾಜಸಾನ್ಸಿ ಗ್ರಾಮದಲ್ಲಿರುವ ನಿರಾನ್ಕಾರಿ ಭವನದಲ್ಲಿ ನಡೆದಿರುವ ಸ್ಫೋಟ ಭಯೋತ್ಪಾದಕ ಕೃತ್ಯವಾಗಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ಹೇಳುತ್ತಿದ್ದಂತೆಯೇ ಇತ್ತ ಪಂಜಾಬ್ ಮುಖ್ಯಮಂತ್ರಿಗಳೂ ಸಹ ಭಯೋತ್ಪಾದಕರ ಕೃತ್ಯವಾಗಿರುವುದನ್ನು ತಳ್ಳಿಹಾಕುವಂತಿಲ್ಲ ಎಂದಿದ್ದಾರೆ.
ಐಎಸ್ಐ ಬೆಂಬಲಿತ ಖಾಲಿಸ್ತಾನಿ ಭಯೋತ್ಪಾದಕರ ಗುಂಪು ಅಥವಾ ಕಾಶ್ಮೀರಿ ಭಯೋತ್ಪಾದಕರ ಗುಂಪಿನ ಕೈವಾಡವನ್ನು ತಳ್ಳಿ ಹಾಕುವುದಕ್ಕೆ ಸಾಧ್ಯವಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ. ಕಷ್ಟಪಟ್ಟು ಉಳಿಸಿಕೊಂಡಿರುವ ಶಾಂತಿಯುತ ವಾತಾವರಣವನ್ನು ಹಾಳುಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅಮರಿಂದರ್ ಸಿಂಗ್ ಇದೇ ವೇಳೆ ಹೇಳಿದ್ದು, ಮೃತರ ಕುಟುಂಬ ಸದಸ್ಯರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಸ್ಫೋಟ ಕೃತ್ಯದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಅಮರಿಂದರ್ ಸಿಂಗ್ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸುಳಿವು ಲಭಿಸಿದ್ದು, ಇಬ್ಬರು ವ್ಯಕ್ತಿಗಳು ಪಿಸ್ತೂಲ್ ಹಿಡಿದ ನಿರಾನ್ಕಾರಿ ಭವನದ ಬಳಿ ನುಗ್ಗುತ್ತಿರುವುದು, ಗ್ರೆನೇಡ್ ನ್ನು ಪ್ರಾರ್ಥನಾ ಸಭೆಯನ್ನು ಗುರಿಯಾಗಿರಿಸಿಕೊಂಡು ಎಸೆದು ಪರಾರಿಯಾಗಿರುವುದು ತನಿಖಾ ತಂಡಕ್ಕೆ ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Amritsarಗ್ರೆನೇಡ್ ದಾಳಿgrenade attackಖಾಲಿಸ್ತಾನಅಮೃತ್ ಸರKhalistaniKashmiri terror groupsಕಾಶ್ಮೀರಿ ಭಯೋತ್ಪಾದಕರ ಗುಂಪು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


