ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ಸಂಜಯ್ ಮಿಶ್ರಾ ನೇಮಕ!
ಜಾರಿ ನಿರ್ದೇಶನಾಲಯದ ನೂತನ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Published On :
ನವದೆಹಲಿ: ಜಾರಿ ನಿರ್ದೇಶನಾಲಯದ ನೂತನ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ದೆಹಲಿಯ ಆದಾಯ ತೆರಿಗೆ ಇಲಾಖೆ ಮುಖ್ಯ ಆಯುಕ್ತರಾಗಿದ್ದ ಸಂಜಯ್ ಮಿಶ್ರಾ ಅವರು ಬಳಿಕ ಅಕ್ಟೋಬರ್ 27ರಂದು ಮೂರು ತಿಂಗಳ ಅವಧಿಗೆ ಜಾರಿ ನಿರ್ದೇಶನಾಲಯಕ್ಕೆ ಹಂಗಾಮಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಅವರನ್ನು ಪೂರ್ಣಾವಧಿಗೆ ಇಡಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ನೇಮಕಾತಿ ಸಮಿತಿ (ಎಸಿಸಿ) ಶನಿವಾರ ರಾತ್ರಿ ಮಿಶ್ರಾ ಅವರನ್ನು ನೇಮಕ ಮಾಡಿ, ಆದೇಶ ಹೊರಡಿಸಿದೆ. ಮುಂದಿನ ಎರಡು ವರ್ಷಗಳವರೆಗೆ ಮಿಶ್ರಾ ಇಡಿಯ ಅಧಿಕಾರದಲ್ಲಿರುತ್ತಾರೆ. ಇಡಿಯ ಮುಖ್ಯಸ್ಥ ಸ್ಥಾನವು ಕೇಂದ್ರ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ಸಮಾನವಾಗಿದೆ.
ಮಿಶ್ರಾ ಅವರು ಭಾರತೀಯ ಕಂದಾಯ ಸೇವೆಯ (ಐಆರ್ ಎಸ್) 1984 ಬ್ಯಾಚ್, ಆಧಾರ ತೆರಿಗೆ ಕೇಡರ್ನ ಅಧಿಕಾರಿಯಾಗಿದ್ದು, ಎನ್ ಡಿಟಿವಿ ಪ್ರಕರಣ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣಗಳ ತನಿಖೆಯಲ್ಲಿ ಮಿಶ್ರಾ ಅವರು ಬಹು ಮಹತ್ವದ ಪಾತ್ರ ವಹಿಸಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiEnforcement Directorateಜಾರಿ ನಿರ್ದೇಶನಾಲಯNDA governmentSanjay Kumar Mishraಸಂಜಯ್ ಕುಮಾರ್ ಮಿಶ್ರಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


