ದೇಶ

ಲಾಲೂ ಪ್ರಸಾದ್ ಕಾಲಿನಲ್ಲಿ ಗುಳ್ಳೆಗಳು, ಬಿಹಾರ ಮಾಜಿ ಸಿಎಂ ಆರೋಗ್ಯ ಸ್ಥಿತಿಯಲ್ಲಿ ಏರುಪೇರು

ರ್ ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಅವರ ಬಲಗಾಲಿನಲ್ಲಿ ಗುಳ್ಳೆಗಳು ಕಾಣಿಸಿಕೊಂಡಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಲಾಲೂ ಪ್ರಸಾದ್ ಕಾಲಿನಲ್ಲಿ ಗುಳ್ಳೆಗಳು, ಬಿಹಾರ ಮಾಜಿ ಸಿಎಂ ಆರೋಗ್ಯ ಸ್ಥಿತಿಯಲ್ಲಿ ಏರುಪೇರು
ಲಾಲೂ ಪ್ರಸಾದ್ ಯಾದವ್
Published On :
ರಾಂಚಿ: ಆರ್ ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಅವರ ಬಲಗಾಲಿನಲ್ಲಿ ಗುಳ್ಳೆಗಳು ಕಾಣಿಸಿಕೊಂಡಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಲಾಲೂ ಪ್ರಸಾದ್ ಯಾದವ್ ಮೇವು ಹಗರಣ ಸಂಬಂಧ ಜೈಲುಶಿಕ್ಷೆ ಅನುಭವಿಸುತ್ತಿದ್ದಾರೆ.
ಲಾಲೂ ಪ್ರಸಾದ್ ಇದೀಗ ರಾಂಚಿಯ ರಾಜೇಂದ್ರ ಇನ್ ಸ್ಟಿಟ್ಯೂಟ್ಆಫ್ ಮೆಡಿಕಲ್ ಸೈನ್ಸಸ್ (ಆರ್ಐಎಂಎಸ್) ನ ವಿಒಶೇಷ ಸೌಲಭ್ಯಗಳುಳ್ಳ ವಾರ್ಡ್ ನಲ್ಲಿ ಚಿಕಿತ್ಸೆ ಹೊಂದುತ್ತಿದ್ದಾರೆ.
ಗುಳ್ಳೆಗಳೆದ್ದ ಕಾರಣ ಕಳೆದ ಎರಡದಿಂದ ಮುರು ದಿನಗಳಲ್ಲಿಲಾಲೂ ಅವರ ದೇಹದ ಸಕ್ಕರೆ ಪ್ರಮಾಣ ಹಾಗೂ ರಕ್ತದೊತ್ತಡ ಅಧಿಕವಾಗಿದೆ.ಈ ಗುಳ್ಳೆಗಳು ಕಡಿಮೆಯಾಗಲು ಇನ್ನಷ್ಟು ಸಮಯಾವಕಾಶ ಹಿಡಿಯಲಿದೆ ಎಂದು ಆರ್ಐಎಂಎಸ್ ವೈದ್ಯರಾದ ಉಮೇಶ್ ಪ್ರಸಾದ್ ಹೇಳಿದ್ದಾರೆ.
ಲಾಲೂ ಅವರ ದೇಹದಲ್ಲಿ ಸಕ್ಕರೆ ಅಂಶ ಅಧಿಕವಾಗಿರುವ ಕಾರಣ ವರಿಗೆ ನೀಡಲಾಗುವ ಇನ್ಸುಲಿನ್ ಪ್ರಮಾಣವನ್ನು ಸಹ ಹೆಚ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ
ಐಆರ್ ಸಿಟಿಸಿ ಭ್ರಷ್ಠಾಚಾರ ಪ್ರೆಅಕರಣದಲ್ಲಿ ಲಾಲೂ ಅವರ ವಿಚಾರಣೆ ಡಿಸೆಂಬರ್ 20ರಂದು ನಡೆಯಲಿದೆ, ಈ ವಿಚಾರಣೆಗಾಗಿ ಲಾಲೂ ವೀಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಝರಾಗಲಿದ್ದಾರೆ.
ಲಾಲೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮುಖತಃ ವಿಚಾರಣೆಗಾಗಿ ಹಾಜರಾಗಲು ಸಾಧ್ಯವಿಲ್ಲ ಎಂದು ಬಿಹಾರ ಮಾಜಿ ಸಿಎಂ ಪರ ವಕೀಲರು ವಾದಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಸೂಚನೆ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.