ವಿವಿಐಪಿ ಚಾಪರ್ ಪ್ರಕರಣ: ಕ್ರಿಶ್ಚಿಯನ್ ಮೈಕೆಲ್ ಗಡಿಪಾರಿಗೆ ದುಬೈ ಕೋರ್ಟ್ ಆದೇಶ
ಬಹುಕೋಟಿ ವಿವಿಐಪಿ ಚಾಪರ್ ಹಗರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಪ್ರಮುಖ ಆರೋಪಿ, ಮಧ್ಯವರ್ತಿ, ಬ್ರಿಟನ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಗಡಿಪಾರಿಗೆ ದುಬೈ ಕೋರ್ಟ್ ಆದೇಶ ನೀಡಿದೆ.

Published On :
ದುಬೈ: ಬಹುಕೋಟಿ ವಿವಿಐಪಿ ಚಾಪರ್ ಹಗರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಪ್ರಮುಖ ಆರೋಪಿ, ಮಧ್ಯವರ್ತಿ, ಬ್ರಿಟನ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಗಡಿಪಾರಿಗೆ ದುಬೈ ಕೋರ್ಟ್ ಆದೇಶ ನೀಡಿದೆ.
ದುಬೈ ನಲ್ಲಿ ಬಂಧನಕ್ಕೊಳಗಾಗಿರುವ ಕ್ರಿಶ್ಚಿಯನ್ ಮೈಕೆಲ್ ನ್ನು ಗಡಿಪಾರು ಮಾಡಬಹುದೆಂದು ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ದುಬೈ ನ ಉಚ್ಚ ನ್ಯಾಯಾಲಯ ಎತ್ತಿಹಿಡಿದಿದ್ದು ಮೈಕೆಲ್ ನ್ನು ಗಡಿಪಾರು ಮಾಡಬಹುದೆಂದು ಹೇಳಿದೆ.
3,600 ಕೋಟಿ ರೂಪಾಯಿ ಮೊತ್ತದ ವಿವಿಐಪಿ ಚಾಪರ್ ಹಗರಣದಲ್ಲಿ ಭಾರತಕ್ಕೆ ಬೇಕಾಗಿರುವ ಕ್ರಿಶ್ಚಿಯನ್ ಮೈಕೆಲ್ ಗಡಿಪಾರು ಆದೇಶ ಭಾರತಕ್ಕೆ ಸಹಕಾರಿಯಾಗಲಿದೆ. ಗಡಿಪಾರು ಮಾಡುವ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದ ಮೈಕೆಲ್ ಪರ ವಕೀಲರು ಇಟಾಲಿ ಹಾಗೂ ಸ್ವಿಟ್ಜರ್ಲ್ಯಾಂಡ್ ಕೋರ್ಟ್ ಗಳು ಬ್ರಿಟನ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ನ್ನು ಗಡಿಪಾರು ಮಾಡದಂತೆ ನೀಡಿದ್ದ ಆದೇಶವನ್ನು ಉಲ್ಲೇಖಿಸಿದ್ದರು. ಅಷ್ಟೇ ಅಲ್ಲದೇ ಅಲ್ಲಿನ ನ್ಯಾಯಾಲಯಗಳು ತನ್ನ ಕಕ್ಷಿದಾರನ ವಿರುದ್ಧ ಪ್ರಕರಣದಲ್ಲಿ ಯಾವುದೇ ಕ್ರಿಮಿನಲ್ ಅಂಶಗಳೂ ಇಲ್ಲವೆಂದು ಹೇಳಿದ್ದನ್ನೂ ದುಬೈ ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಜೊತೆಗೆ ಗಡಿಪಾರಿಗಾಗಿ ಸಲ್ಲಿಸಲಾಗಿರುವ ಮನವಿ ಯುಎಇ ಹಾಗೂ ಭಾರತ ನಡುವಿನ ಅಂತಾರಾಷ್ಟ್ರೀಯ ಒಪ್ಪಂದದ ಉಲ್ಲಂಘನೆಯಾಗಿದೆ, ಗಡಿಪಾರಿಗೆ ಮನವಿ ಮಾಡಬೇಕಾದರೆ ಭಾರತ ಸರಿಯಾದ ಪ್ರಕ್ರಿಯೆಗಳನ್ನು ಪಾಲಿಸಿಲ್ಲ ಎಂದೂ ಮೈಕೆಲ್ ಪರ ವಕೀಲರು ವಾದಿಸಿದ್ದರು.
ಮೈಕೆಲ್ ಪಾಸ್ಪೋರ್ಟ್ ನ್ನು ವಶಕ್ಕೆ ಪಡೆದಿದ್ದ ದುಬೈ ನ ನ್ಯಾಯಾಂಗ ಅಧಿಕಾರಿಗಳು ಸೆ.2 ರಂದು ಆತನನ್ನು ವಾಂಟೆಡ್ ಎಂದು ಘೋಷಿಸಿದ್ದರು. ಈಗ ಭಾರತಕ್ಕೆ ಬೇಕಾಗಿರುವ ಆರೋಪಿಯನ್ನು ದುಬೈ ನ್ಯಾಯಾಲಯ ಗಡಿಪಾರು ಮಾಡಲು ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
VVIP chopper caseDubai Courtದುಬೈ ಕೋರ್ಟ್Michel\'s extraditionವಿವಿಐಪಿ ಚಾಪರ್ ಪ್ರಕರಣಕ್ರಿಶ್ಚಿಯನ್ ಮೈಕೆಲ್ ಗಡಿಪಾರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


