'ಮೋದಿ ಭಯ'ದಿಂದ ಪ್ರತಿಪಕ್ಷಗಳು ನರಳುತ್ತಿವೆ- ಅಮಿತ್ ಶಾ
ಪ್ರತಿಪಕ್ಷಗಳು ಮೋದಿ ಭಯದಿಂದ ನರಳುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಮಧ್ಯಪ್ರದೇಶ: ಪ್ರತಿಪಕ್ಷಗಳು ಮೋದಿ ಭಯದಿಂದ ನರಳುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ನರಸಿಂಗ್ ಪುರದಲ್ಲಿಂದು ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನೆಹರು-ಗಾಂಧಿಯ ಕುಟುಂಬದ ನಾಲ್ಕು ಕುಟುಂಬಗಳ ಆಡಳಿತದ ಸಂದರ್ಭದಲ್ಲಿ ದೇಶಕ್ಕಾಗಿ ಏನು ಮಾಡಿದ್ದಾರೆ ಎಂಬುದನ್ನು ಕಾಂಗ್ರೆಸ್ ಲೆಕ್ಕ ಕೊಡಲಿ ಎಂದರು.
ಪ್ರತಿಪಕ್ಷಗಳು ನರೇಂದ್ರ ಮೋದಿ ಭಯದಿಂದ ನರಳುತ್ತಿವೆ. ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ತೆಗೆಯಲು ಕಾಯುತ್ತಿದ್ದಾರೆ. ಆದರೆ.ನಾವು ದೇಶದಲ್ಲಿನ ಬಡತನ, ಅಭದ್ರತೆ, ಮತ್ತು ವಾಯುಮಾಲಿನ್ಯ ಸೇರಿದಂತೆ ಮತ್ತಿತರ ಸಮಸ್ಯೆಗಳನ್ನು ನಿರ್ಮೂಲನೆ ಮಾಡುವುದಾಗಿ ಹೇಳಿದರು.
ಮೋದಿ ಸರ್ಕಾರ ಕಳೆದ ನಾಲ್ಕುವರ್ಷಗಳಲ್ಲಿ 129 ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


