ದೇಶ

ತೆಲಂಗಾಣ ಚುನಾವಣೆಗೆ ಸ್ಪರ್ಧಿಸದಿರಲು ಪವನ್ ಕಲ್ಯಾಣ ಪಕ್ಷ ನಿರ್ಧಾರ, ಲೋಕಸಭೆ ಮೇಲೆ ಕಣ್ಣು

ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯತ್ತ ಹೆಚ್ಚು ಗಮನಹರಿಸುವುದಕ್ಕಾಗಿ ಡಿಸೆಂಬರ್ 7ರಂದು ನಡೆಯುವ ತೆಲಂಗಾಣ ವಿಧಾನಸಭೆ ಚುನಾವಣೆಗೆ...

ತೆಲಂಗಾಣ ಚುನಾವಣೆಗೆ ಸ್ಪರ್ಧಿಸದಿರಲು ಪವನ್ ಕಲ್ಯಾಣ ಪಕ್ಷ ನಿರ್ಧಾರ, ಲೋಕಸಭೆ ಮೇಲೆ ಕಣ್ಣು
ಪವನ್ ಕಲ್ಯಾಣ್
Published On :
ಅಮರಾವತಿ: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯತ್ತ ಹೆಚ್ಚು ಗಮನಹರಿಸುವುದಕ್ಕಾಗಿ ಡಿಸೆಂಬರ್ 7ರಂದು ನಡೆಯುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದಿರಲು ಖ್ಯಾತ ತೆಲುಗು ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಅವರ ಪಕ್ಷ ಜನಸೇನಾ ನಿರ್ಧರಿಸಿದೆ.
ಪಕ್ಷದ ಎಲ್ಲಾ ನಾಯಕರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ತಿಳಿಸಿದ್ದಾರೆ.
ತೆಲಂಗಾಣ ವಿಧಾನಸಭೆ ಚುನಾವಣೆ ನಿಗದಿಯಂತೆ 2019ರಲ್ಲಿ ನಡೆದಿದ್ದರೆ ನಾವು ಸ್ಪರ್ಧಿಸುತ್ತಿದ್ದೇವೆ. ಆದರೆ ಅವಧಿಗೂ ಮುನ್ನ ನಡೆಯುತ್ತಿರುವುದರಿಂದ ನಮ್ಮ ಪಕ್ಷ ಸ್ಪರ್ಧೆಗೆ ಸಿದ್ಧವಾಗಿಲ್ಲ. ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಜನಸೇನಾ ಸ್ಪರ್ಧಿಸಲಿದೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.
ತೆಲಂಗಾಣದಲ್ಲಿ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ವೈಎಸ್ ಆರ್ ಕಾಂಗ್ರೆಸ್ ಸಹ ಚುನಾವಣೆಯಿಂದ ದೂರ ಉಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.