ರಾಜಸ್ತಾನ; ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ರಾಜೀನಾಮೆ
ಮುಂಬರುವ ರಾಜಸ್ತಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ್ದರಿಂದ ...

ಜೈಪುರ: ಮುಂಬರುವ ರಾಜಸ್ತಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ್ದರಿಂದ ಮುನಿಸಿಕೊಂಡಿರುವ ರಾಮ್ಗರ್ ಶಾಸಕ ಜ್ಞಾನ್ ದೇವ್ ಅಹುಜಾ ಪಕ್ಷವನ್ನು ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಇವರ ಜೊತೆ ಅನೇಕ ಶಾಸಕರು ಮತ್ತು ರಾಜ್ಯ ಸಚಿವರೊಬ್ಬರು ಪಕ್ಷ ತೊರೆದಿದ್ದಾರೆ. ಕಳೆದ ಭಾನುವಾರ ಭಾರತೀಯ ಜನತಾ ಪಾರ್ಟಿ ಡಿಸೆಂಬರ್ 7ರಂದು ನಡೆಯುವ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು ಮೂರು ಪಟ್ಟಿಗಳನ್ನು ಬಿಡುಗಡೆ ಮಾಡಲಿರುವ ಪಕ್ಷ 200 ಅಭ್ಯರ್ಥಿಗಳಲ್ಲಿ 170 ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಿದೆ.
ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನನ್ನ ಹೆಸರನ್ನು ಕೈಬಿಡಲಾಗಿದೆ. ನನ್ನ ಹೆಸರನ್ನು ಕೈಬಿಟ್ಟರೇಕೆ ಎಂದು ಕೂಡ ಕಾರಣ ನೀಡಲಿಲ್ಲ. ನನ್ನ ಬೆಂಬಲಿಗರು ಮತ್ತು ಕುಟುಂಬ ಸದಸ್ಯರ ಒತ್ತಡದಿಂದಾಗಿ ಪಕ್ಷಕ್ಕೆ ರಾಜೀನಾಮೆ ನೀಡಿದೆ. ಸಂಗನೇರ್ ಕ್ಷೇತ್ರದಿಂದ ಟಿಕೆಟ್ ಕೇಳಿದೆ, ಆದರೆ ಪಕ್ಷದವರು ನೀಡಲಿಲ್ಲ. ಈ ಬಾರಿ ಚುನಾವಣೆಯಲ್ಲಿ ಸಂಗನೇರ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದೇನೆ ಎಂದು ಅಹುಜಾ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮದನ್ ಲಾಲ್ ಸೈನಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವುದಾಗಿ ಅಹುಜಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


