ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಆರ್ಟಿಲರಿ ಶೆಲ್ ಹೊರತೆಗೆಯುವಾಗ ಸಂಭವಿಸಿದ ಸ್ಫೋಟವೇ ದುರಂತಕ್ಕೆ ಕಾರಣ!
ಮಹಾರಾಷ್ಟ್ರದ ಪುಲ್ ಗಾಂವ್ ಸೇನಾ ಡಿಪೋದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಅವಧಿ ಮುಗಿದ ಶೆಲ್ ಸ್ಫೋಟಗೊಂಡಿದ್ದೇ ದುರಂತಕ್ಕೆ ಕಾರಣ ಎಂದು ಸೇನಾ ಮೂಲಗಳು ತಿಳಿಸಿವೆ.

Published On :
ವಾರ್ಧಾ: ಮಹಾರಾಷ್ಟ್ರದ ಪುಲ್ ಗಾಂವ್ ಸೇನಾ ಡಿಪೋದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಆರ್ಟಿಲರಿ ಶೆಲ್ ಹೊರತೆಗೆಯುವಾಗ ಸ್ಫೋಟ ಸಂಭವಿಸಿದ್ದೇ ದುಂರಂತಕ್ಕೆ ಕಾರಣ ಎಂದು ಸೇನಾ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದ ಪುಲ್ ಗಾಂವ್ ಸೇನಾ ಡಿಪೋದಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ಶಸ್ತ್ರಾಸ್ತ್ರ ನಿರ್ಮಾಣ ಕಾರ್ಖಾನೆಯ ಉದ್ಯೋಗಿ ಹಾಗೂ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಪೈಕಿ ನಾಲ್ಕು ಮಂದಿ ಸ್ಫೋಟ ಸಂಭವಿಸಿದ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಂತೆಯೇ ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೇನಾ ಮೂಲಗಳು ತಿಳಿಸಿರುವಂತೆ 23 ಎಂಎಂ ಫಿರಂಗಿಯನ್ನು ವಿಲೇವಾರಿಗಾಗಿ ಕೆಳಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಫಿರಂಗಿಯನ್ನು ನಾಗ್ಪುರದಿಂದ 80 ಕಿ.ಮೀ. ದೂರದ ಪುಲ್ ಗಾಂವ್ ಸೇನಾ ಡಿಪೋದಿಂದ ವಿಶಾಲ ಮೈದಾನಕ್ಕೆ ಕೊಂಡೊಯ್ಯಲಾಗಿತ್ತು. ಈ ವೇಳೆ ಅವಧಿ ಮುಗಿದ ಶೆಲ್ ಸ್ಛೋಟಗೊಂಡಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ಮಧ್ಯಪ್ರದೇಶ ಮೂಲದ ಫಿರಂಗಿ ಫ್ಯಾಕ್ಟರಿಗೆ ಸ್ಫೋಟಕಗಳ ವಿಲೇವಾರಿಗೆ ಈ ಸ್ಥಳವನ್ನು ನೀಡಲಾಗಿತ್ತು ಎಂದು ವರದಿ ಮಾಡಿದೆ.
ಇನ್ನು 2016ರಲ್ಲಿ ಇದೇ ಪುಲ್ ಗಾಂವ್ ಸೇನಾ ಡಿಪೋದಲ್ಲಿ ಇಂತಹುದೇ ದುರ್ಘಟನೆ ಸಂಭವಿಸಿ 16 ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮಹಾರಾಷ್ಟ್ರMaharashtraIndian ArmyDeathಸಾವುಸ್ಫೋಟಭಾರತೀಯ ಸೇನೆWardhaMaharashtra Ordnance DepotExplossionವಾರ್ಧಾಮಹಾರಾಷ್ಟ್ರ ಸೇನಾಡಿಪೋ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


