ದೇಶ

ಡಿಸೆಂಬರ್'ರೊಳಗಾಗಿ ರಾಮ ಮಂದಿರ ಕುರಿತು ಸುಗ್ರೀವಾಜ್ಞೆ ಹೊರಡಿಸಿ, ಇಲ್ಲದಿದ್ದರೆ, ನಿಮ್ಮ ವಿರುದ್ಧ ನಿಲ್ಲುತ್ತೇವೆ: ಕೇಂದ್ರಕ್ಕೆ ವಿಹೆಚ್'ಪಿ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕುರಿತು ಡಿಸೆಂಬರ್ ಒಳಗಾಗಿ ಸುಗ್ರೀವಾಜ್ಞೆ ಹೊರಡಿಸಿ, ಇಲ್ಲದೇ ಹೋದರೆ ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ವಿರೋಧ ಪಕ್ಷವಾಗಿ ನಿಲ್ಲುತ್ತೇವೆಂದು ಕೇಂದ್ರ ಸರ್ಕಾರಕ್ಕೆ ವಿಶ್ವ ಹಿಂದು ಪರಿಷತ್ ಮಂಗಳವಾರ ಎಚ್ಚರಿಕೆ ನೀಡಿದೆ...

ಡಿಸೆಂಬರ್'ರೊಳಗಾಗಿ ರಾಮ ಮಂದಿರ ಕುರಿತು ಸುಗ್ರೀವಾಜ್ಞೆ ಹೊರಡಿಸಿ, ಇಲ್ಲದಿದ್ದರೆ, ನಿಮ್ಮ ವಿರುದ್ಧ ನಿಲ್ಲುತ್ತೇವೆ: ಕೇಂದ್ರಕ್ಕೆ ವಿಹೆಚ್'ಪಿ
ಸಂಗ್ರಹ ಚಿತ್ರ
Published On :
ವಿಶಾಖಪಟ್ಟಣಂ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕುರಿತು ಡಿಸೆಂಬರ್ ಒಳಗಾಗಿ ಸುಗ್ರೀವಾಜ್ಞೆ ಹೊರಡಿಸಿ, ಇಲ್ಲದೇ ಹೋದರೆ ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ವಿರೋಧ ಪಕ್ಷವಾಗಿ ನಿಲ್ಲುತ್ತೇವೆಂದು ಕೇಂದ್ರ ಸರ್ಕಾರಕ್ಕೆ ವಿಶ್ವ ಹಿಂದು ಪರಿಷತ್ ಮಂಗಳವಾರ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಮಾತನಾಡಿರುವ ವಿಹೆಚ್'ಪಿ ಜಂಟಿ ಪ್ರಧಾನ ಕಾರ್ಯದರ್ಶಿ ವೈ.ರಾಘವುಲು ಅವರು, ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಸುಗ್ರೀವಾಜ್ಞೆ ಹೊರಡಿಸುವಂತೆ ಸಂಸತ್ತಿನ ಎಲ್ಲಾ ಸದಸ್ಯರು ಕೇಂದ್ರದ ಮೇಲೆ ಒತ್ತಡ ತರುವಂತೆ ಮಾಡಲಾಗುತ್ತದೆ. ಡಿಸೆಂಬರ್ ಒಳಗಾಗಿ ಸರ್ಕಾರ ಈ ಕುರಿತು ಸುಗ್ರೀವಾಜ್ಞೆ ಹೊರಡಿಸಿದೇ ಹೋದಲ್ಲಿ, ಮುಂದಿನ ಚುನಾವಣೆ ವೇಳೆ ವಿಹೆಚ್'ಪಿ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. 
ಬಳಿಕ ಜನವರಿ 31 ಮತ್ತು ಫೆಬ್ರವರಿ 1 ರಂದು ನಡೆಯಲಿರುವ ಕುಂಭ ಮೇಳದ ವೇಳೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತದೆ. ಪ್ರತಿಭಟನೆಯಲ್ಲಿ 20 ಸಾವಿರಕ್ಕೂ ಹೆಚ್ಚು ಹಿಂದು ಧರ್ಮ ಪ್ರಚಾರದ ಪ್ರಮುಖರು ಹಾಗೂ ಧಾರ್ಮಿಕ ಪೀಠದ ಶ್ರೀಗಳು ಭಾಗವಿಸುತ್ತಾರೆ. 
ರಾಮ ಮಂದಿರ ನಿರ್ಮಾಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಈಗಾಗಲೇ ನಾವು ಮಾಡುತ್ತಿದ್ದೇವೆ. ಅಕ್ಟೋಬರ್ ತಿಂಗಳಿನಲ್ಲಿಯೇ ಒಂದು ಸುತ್ತಿನ ಜಾಗೃತಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ್ದೇವೆ. ಪ್ರಸಕ್ತ ತಿಂಗಳು ಸಂಸತ್ತಿನ ಸಾಕಷ್ಟು ಸದಸ್ಯರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ತಿಂಗಳ ಅಂತ್ಯದಲ್ಲಿ ಸಂಸದರೊಂದಿಗೂ ಮಾತುಕತೆ ನಡೆಸಲಾಗುತ್ತದೆ. ವಿಶೇಷ ಕಾರ್ಯಗಳು, ಯೋಜನೆಗಳು ರಾಮ ಭಜನೆ ಹಾಗೂ ದೇಶದ ಎಲ್ಲಾ ಗ್ರಾಮ ಗ್ರಾಮಗಳಲ್ಲೂ ಪೂಜಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ. ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗುವವರೆಗೂ ನಮ್ಮ ಎಲ್ಲಾ ಪ್ರಯತ್ನಗಳು ಮುಂದುವರೆಯಲಿವೆ. 
ರಾಮ ಮಂದಿನ ಶತ ಶತಮಾನ ಕಾಲದ ಕೋಟ್ಯಾಂತರ ಭಾರತೀಯರ ಕನಸ್ಸಾಗಿದೆ. ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾದರೂ ಕೇಂದ್ರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ರಾಮ ಮಂದಿರ ನಿರ್ಮಾಣ ಭರವಸೆ ಈಡೇರಿಸುವ ಸ್ಥಿತಿಯಲ್ಲಿ ಕೇಂದ್ರ ಸರ್ಕಾರವಿಲ್ಲ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಟೀಕಿಸಿರುವ ಅವರು, ನ್ಯಾಯಾಲಯದ ಆದೇಶ ತರಾತುರಿಯ ಆದೇಶವಾಗಿದೆ. ಭಾರತೀಯ ಸಂಪ್ರದಾಯದಲ್ಲಿ ಸಾಕಷ್ಟು ಧರ್ಮಗಳು ಹಾಗೂ ಸಂಪ್ರದಾಯಗಳಿವೆ. ಕೆಲ ನ್ಯಾಯಾಧೀಶರು ಹೊಸ ನಿಯಮಗಳನ್ನು ಸಂಪ್ರದಾಯವೆಂದು ಹೇಳಬಾರದು. ಇದು ಕೋಟ್ಯಾಂತರ ಭಕ್ತಾದಿಗಳ ನಂಬಿಕೆಗಳಿಗೆ ನೋವುಂಟು ಮಾಡಿದಂತಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.