ಸ್ವಾಗತಿಸುವ ವೇಳೆ ಬಿಜೆಪಿ ನಾಯಕನಿಗೆ ಚಪ್ಪಲಿ ಹಾರ ಹಾಕಿದ ಯುವಕ: ವಿಡಿಯೋ ವೈರಲ್
ಮಧ್ಯಪ್ರದೇಶದ ಬಿಜೆಪಿ ಶಾಸಕರೊಬ್ಬರನ್ನು ಸ್ವಾಗತಿಸುವ ವೇಳೆ ಯುವಕನೊಬ್ಬ ಚಪ್ಪಲಿ ಹಾರ ಹಾಕಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ...

Published On :
ಭೋಪಾಲ್: ಮಧ್ಯಪ್ರದೇಶದ ಬಿಜೆಪಿ ಶಾಸಕರೊಬ್ಬರನ್ನು ಸ್ವಾಗತಿಸುವ ವೇಳೆ ಯುವಕನೊಬ್ಬ ಚಪ್ಪಲಿ ಹಾರ ಹಾಕಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮಧ್ಯಪ್ರದೇಶದ ನಗಾಡಾ ಕಚ್'ರೋಡ್'ಗೆ ಚುನಾವಣಾ ಪ್ರಚಾರ ಹಿನ್ನಲೆಯಲ್ಲಿ ಆಗಮಿಸಿದ್ದ ಬಿಜೆಪಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ದಿಲೀಪ್ ಶೆಖಾವತ್ ಅವರಿಗೆ ಯುವಕನೋರ್ವ ಚಪ್ಪಲಿ ಹಾರ ಹಾಕಿದ್ದಾನೆ.
ಬಿಜೆಪಿ ಕಾರ್ಯಕರ್ತನ ಸೋಗಿನಲ್ಲಿ ಸ್ಥಳದಲ್ಲಿದ್ದ ಯುವಕ ಶಾಸಕನಿಗೆ ಚಪ್ಪಲಿ ಹಾರ ಹಾಕಿದ್ದಾನೆ. ಚಪ್ಪಲಿ ಹಾರ ಹಾಕಿದ ಕೂಡಲೇ ತೀವ್ರವಾಗಿ ಕೆಂಡಾಮಂಡಲಗೊಂಡ ಶಾಸಕ ಅದನ್ನು ಕಿತ್ತೆಸೆದು ಯುವಕನಿಗೆ ಥಳಿಸಿದ್ದಾರೆ. ಘಟನೆಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


