ಬಿಎಸ್ ಪಿ ಜೊತೆ ಮೈತ್ರಿ ವಿಫಲ: ಕಾಂಗ್ರೆಸ್ ನ್ನು ದೂಷಿಸಿದ ಅಖಿಲೇಶ್ ಯಾದವ್
ಮಧ್ಯಪ್ರದೇಶದಲ್ಲಿ ಮಹಾಮೈತ್ರಿಕೂಟ ರಚನೆ ವಿಫಲವಾಗಿರುವುದರ ಬಗ್ಗೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದು...

Published On :
ಲಖನೌ: ಮಧ್ಯಪ್ರದೇಶದಲ್ಲಿ ಮಹಾಮೈತ್ರಿಕೂಟ ರಚನೆ ವಿಫಲವಾಗಿರುವುದರ ಬಗ್ಗೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದು, ಮೈತ್ರಿಕೂಟದಲ್ಲಿ ಬಿಎಸ್ ಪಿಯನ್ನು ಸೇರಿಸಿಕೊಳ್ಳುವುದಕ್ಕೆ ಕಾಂಗ್ರೆಸ್ ಒಪ್ಪದೇ ಇದ್ದ ಹಿನ್ನೆಲೆಯಲ್ಲಿ ಎಸ್ ಪಿ ಸಹ ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರ ಉಳಿಯಬೇಕಾಯಿತು ಎಂದು ಹೇಳಿದ್ದಾರೆ.
ಮಹಾಮೈತ್ರಿಯ ವಿಷಯದಲ್ಲಿ ಕಾಂಗ್ರೆಸ್ ವಿರುದ್ಧ ದೋಷಾರೋಪಣೆ ಮಾಡಿರುವ ಅಖಿಲೇಶ್ ಯಾದವ್, ಬಿಎಸ್ ಪಿ-ಎಸ್ ಪಿ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದರೆ ಮಧ್ಯಪ್ರದೇಶದಲ್ಲಿ 200 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಧ್ಯಪ್ರದೇಶ ಹಾಗೂ ರಾಜಸ್ಥಾನ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ಅಂತರ ಕಾಯ್ದುಕೊಂಡಿದ್ದ ಬಿಎಸ್ ಪಿ, ಏಕಾಂಗಿಯಾಗಿ ಚುನಾವಣೆ ಎದುರಿಸಲು ನಿರ್ಧರಿಸಿತ್ತು. ಬಿಎಸ್ ಪಿ ನಾಯಕಿ ಮಾಯಾವತಿ ಅವರ ಈ ನಡೆಯಲ್ಲಿ 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಹಾಮೈತ್ರಿಕೂಟಕ್ಕೆ ಉಂಟಾಗಬಹುದಾದ ಹಿನ್ನಡೆ ಎಂದೇ ವಿಶ್ಲೇಷಿಸಲಾಗಿತ್ತು. ಈಗ ಬಿಎಸ್ ಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ವಿಫಲವಾದ ಕಾಂಗ್ರೆಸ್ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Akhilesh Yadavಅಖಿಲೇಶ್ ಯಾದವ್SPGrand allianceಮಹಾಮೈತ್ರಿಕೂಟಎಸ್ ಪಿBSPಬಿಎಸ್ ಪಿ2019 elections2019 ರ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


