ಕಣಿವೆ ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಎನ್ ಸಿ ಬೆಂಬಲಿತ ಪಿಡಿಪಿ-ಕಾಂಗ್ರೆಸ್ ಸರ್ಕಾರ ರಚನೆ?!
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನ್ಯಾಷನಲ್ ಕಾನ್ಫರೆನ್ಸ್ ಬೆಂಬಲದೊಂದಿಗೆ ಪಿಡಿಪಿ-ಕಾಂಗ್ರೆಸ್ ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನ್ಯಾಷನಲ್ ಕಾನ್ಫರೆನ್ಸ್ ಬೆಂಬಲದೊಂದಿಗೆ ಪಿಡಿಪಿ-ಕಾಂಗ್ರೆಸ್ ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದೆ.
ರೀಡಿಫ್ ಜಾಲತಾಣದಲ್ಲಿ ಪ್ರಕಟವಾಗಿರುವ ವರದಿಯ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಮೂರು ಪಕ್ಷಗಳು ಒಗ್ಗೂಡಲು ಚಿಂತನೆ ನಡೆದಿರುವುದರ ಬಗ್ಗೆ ಸ್ವತಃ ಮೂರೂ ಪಕ್ಷಗಳ ನಾಯಕರು ಸುಳಿವು ನೀಡಿದ್ದಾರೆ. ಡಿ.19 ಕ್ಕೆ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ಬಂದು 6 ತಿಂಗಳಾಗಲಿವೆ. ಈ ಬಳಿಕ ರಾಜ್ಯಪಾಲರ ಆಡಳಿತಾವಧಿಯನ್ನು ವಿಸ್ತರಣೆ ಮಾಡುವುದಕ್ಕೆ ಅವಕಾಶವಿಲ್ಲ. ಈ ಬಳಿಕ ರಾಷ್ಟ್ರಪತಿ ಆಡಳಿತ ಹೇರುವುದಕ್ಕೆ ಪ್ರಸ್ತಾವನೆ ಇದೆಯಾದರೂ ರಾಜ್ಯಪಾಲ ಸತ್ಯಪಾಲ್ ಮಲೀಕ್ ಮಾತ್ರ ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಯ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.
ಜೂ.16 ರಂದು ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ಮುರಿದುಬಿದ್ದಿತ್ತು. ಈ ಬಳಿಕ ಪಿಡಿಪಿಯ ಒಂದಷ್ಟು ಶಾಸಕರನ್ನು ಸೆಳೆದು ಸಜ್ಜದ್ ಲೋನ್ ಅವರ ಪೀಪಲ್ಸ್ ಕಾನ್ಫರೆನ್ಸ್ ಪಕ್ಷದ ಇಬ್ಬರು ಶಾಸಕರು, ಬಿಜೆಪಿಯ 25 ಶಾಸಕರು ಸೇರಿ ಸರ್ಕಾರ ರಚನೆ ಮಾಡುವ ಸಾಧ್ಯತೆಗಳ ಬಗ್ಗೆಯೂ ಊಹಾಪೋಹವಿತ್ತು. ಆದರೆ ಈಗ ಕಣಿವೆ ರಾಜ್ಯದಲ್ಲಿ ಬೇರೆಯದ್ದೇ ರೀತಿಯಲ್ಲಿ ರಾಜಕೀಯ ದಾಳ ಉರುಳಿಸಲಾಗುತ್ತಿದ್ದು, ಕಾಂಗ್ರೆಸ್, ಪಿಡಿಪಿ, ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದು 2002-2007 ಅವಧಿಯಲ್ಲಿ ನಡೆದಂತೆ ಎನ್ ಸಿ ಬೆಂಬಲಿತ ಪಿಡಿಪಿ-ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ನಂಬರ್ 44. ಪಿಡಿಪಿ ಬಳಿ 28 ಶಾಸಕರಿದ್ದರೆ ಎನ್ ಸಿ 15, ಕಾಂಗ್ರೆಸ್ 12 ಶಾಸಕರನ್ನು ಹೊಂದಿದ್ದು ಮೂರು ಪಕ್ಷಗಳು ಒಗ್ಗೂಡಿದರೆ ಸ್ಪಷ್ಟ ಬಹುಮತ ದೊರೆಯಲಿವೆ. ಸಮ್ಮಿಶ್ರ ಸರ್ಕಾರದ ಭಾಗವಾಗಿರುವುದಕ್ಕೆ ಎನ್ ಸಿ ಇಚ್ಛಿಸುತ್ತಿಲ್ಲವಾದರೂ ಪಿಡಿಪಿ-ಕಾಂಗ್ರೆಸ್ ಸರ್ಕಾರ ರಚನೆಗೆ ಮುಂದಾದರೆ ಬಾಹ್ಯ ಬೆಂಬಲ ನೀಡುವುದಾಗಿ ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ. ಒಂದು ವೇಳೆ ಈ ಪ್ರಯೋಗ ಯಶಸ್ವಿಯಾದರೆ ಪಿಡಿಪಿ ನೇತೃತ್ವದ ಸರ್ಕಾರವೇ ಅಸ್ಥಿತ್ವಕ್ಕೆ ಬರಲಿದೆಯಾದರೂ ಮೆಹಬೂಮಾ ಮುಫ್ತಿ ಮುಖ್ಯಮಂತ್ರಿಯಾಗುವ ಸಾಧ್ಯತೆಗಳೂ ಕಡಿಮೆ ಇವೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


