ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಗೆ ರಾಜ್ಯಪಾಲರ ಆದೇಶ: ಕಾಂಗ್ರೆಸ್-ಪಿಡಿಪಿ-ಎನ್ ಸಿ ಪ್ರಯತ್ನಕ್ಕೆ ಹಿನ್ನಡೆ
ರಾಜ್ಯಪಾಲರು ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.

Published On :
ಶ್ರೀನಗರ: ರಾಜಕೀಯ ಅಸ್ಥಿರತೆ ಎದುರಿಸುತ್ತಿದ್ದ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಹಾಗೂ ಪೀಪಲ್ಸ್ ಕಾನ್ಫರೆನ್ಸ್ ನ ನಾಯಕ ಸಾಜದ್ ಲೋನ್ ಸರ್ಕಾರ ರಚಿಸುವುದಕ್ಕೆ ಪ್ರತ್ಯೇಕವಾಗಿ ಹಕ್ಕು ಮಂಡಿಸಿದ್ದು, ಇಬ್ಬರಿಗೂ ಅವಕಾಶ ನೀಡದೇ ರಾಜ್ಯಪಾಲರು ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.
ರಾಜ್ಯಪಾಲರ ಕಚೇರಿಯಿಂದ ವಿಧಾನಸಭೆ ವಿಸರ್ಜನೆ ಕುರಿತು ಆದೇಶ ಹೊರಡಿಸಲಾಗಿದ್ದು, ಸರ್ಕಾರ ರಚಿಸಲು ತೀವ್ರ ಕಸರತ್ತು ನಡೆಸುತ್ತಿದ್ದ ಕಾಂಗ್ರೆಸ್-ಪಿಡಿಪಿ-ಎನ್ ಸಿ ಪಕ್ಷಗಳಿಗೆ ಹಿನ್ನಡೆಯುಂಟಾಗಿದೆ.
ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಎನ್ ಸಿ ಬಾಹ್ಯಬೆಂಬಲ ಪಡೆದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವುದಕ್ಕೆ ಅವಕಾಶ ನೀಡಲು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದೇ ವೇಳೆಗೆ ಪೀಪಲ್ಸ್ ಕಾನ್ಫರೆನ್ಸ್ ನ ಸಾಜಲ್ ಲೋನ್ ಸಹ ತಮ್ಮ ಬಳಿ ಸರ್ಕಾರ ರಚಿಸುವುದಕ್ಕೆ ಅಗತ್ಯ ಬಹುಮತ ಇದೆ ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಆದರೆ ರಾಜ್ಯಪಾಲರು ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯಪಾಲರ ಆದೇಶವನ್ನು ನ್ಯಾಷನಲ್ ಕಾನ್ಫರೆನ್ಸ್ ಸ್ವಾಗತಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
governorJammu and Kashmirಜಮ್ಮು-ಕಾಶ್ಮೀರgovernment formationMehbooba Muftiರಾಜ್ಯಪಾಲರುವಿಧಾನಸಭೆ ವಿಸರ್ಜನೆAssembly Dissolved
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


