ಮೋದಿ ಸರ್ಕಾರ ಪ್ರಜಾಪ್ರಭುತ್ವ ದುರ್ಬಲಗೊಳಿಸುವ ನಿರ್ಣಯ ಕೈಗೊಂಡಿದೆ: ಮನಮೋಹನ್ ಸಿಂಗ್
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ನಿರ್ಣಯ...

Published On :
ಇಂದೋರ್: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ನಿರ್ಣಯ ಕೈಗೊಂಡಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬುಧವಾರ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ, ಮೋದಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಂಸತ್ತು ಮತ್ತು ಸಿಬಿಐನಂತಹ ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಮೋದಿ ಸರ್ಕಾರ ಪ್ರಜಾಪ್ರಭುತ್ವವನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ವ್ಯವಸ್ಥಿತವಾಗಿ ದುರ್ಬಲಗೊಳಿಸುವ ಯತ್ನ ನಡೆಸುತ್ತಿದೆ. ದೇಶದ ಕಾನೂನು ಅಪಾಯದಲ್ಲಿದ್ದು, ಈ ಪರಿಸ್ಥಿತಿ ಬದಲಾಗದಿದ್ದರೆ ಇತಿಹಾಸ ನಮ್ಮನ್ನು ಕ್ಷಮಿಸಲ್ಲ ಎಂದಿದ್ದಾರೆ.
ಇದೇ ವೇಳೆ ನೋಟು ಅಮಾನ್ಯೀಕರಣ ಒಂದು 'ಸಂಘಟಿತ ಲೂಟಿ ಮತ್ತು ಕಾನೂನು ಬಾಹಿರ ಲೂಟಿ' ಎಂದು ಮಾಜಿ ಪ್ರಧಾನಿ ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


