ದೇಶ

ಹಿಂದೂ ಧರ್ಮ ಹೇಳಿಕೆ: ರಾಹುಲ್ ಸೂಚನೆ ನಂತರ ಕ್ಷಮೆ ಕೇಳಿದ ಸಿಪಿ ಜೋಶಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ಉಮಾ ಭಾರತಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜಸ್ಥಾನದ ಹಿರಿಯ ಕಾಂಗ್ರಸ್ ನಾಯಕ ಸಿಪಿ ಜೋಶಿ ಅವರು ಶುಕ್ರವಾರ ಕ್ಷಮೆಯಾಚಿಸಿದ್ದಾರೆ.

ಹಿಂದೂ ಧರ್ಮ ಹೇಳಿಕೆ: ರಾಹುಲ್ ಸೂಚನೆ ನಂತರ ಕ್ಷಮೆ ಕೇಳಿದ ಸಿಪಿ ಜೋಶಿ
ಸಿಪಿ ಜೋಶಿ
Published On :
ನವದೆಹಲಿ/ಜೈಪುರ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಉಮಾ ಭಾರತಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜಸ್ಥಾನದ ಹಿರಿಯ ಕಾಂಗ್ರಸ್ ನಾಯಕ ಸಿಪಿ ಜೋಶಿ ಅವರು ಶುಕ್ರವಾರ ಕ್ಷಮೆಯಾಚಿಸಿದ್ದಾರೆ.
ನಿನ್ನೆ ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಜೋಶಿ ಅವರು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನಾಯಕಿ ಉಮಾ ಭಾರತಿ ಹಾಗೂ ಹಿಂದೂ ಕಾರ್ಯಕರ್ತೆ ಸಾಧ್ವಿ ರಿತಾಂಭರ ಅವರು ಬ್ರಾಹ್ಮಣರೇ ಅಲ್ಲ. ಅವರಿಗೆ ಹಿಂದೂ ಧರ್ಮದ ಬಗ್ಗೆ ಏನು ಗೊತ್ತಿತೆ? ಬ್ರಾಹ್ಮಣರಿಗೆ ಮಾತ್ರ ಹಿಂದೂ ಧರ್ಮದ ಬಗ್ಗೆ ಜ್ಞಾನವಿದೆ ಎಂದಿದ್ದರು.
ಜೋಶಿ ಅವರ ಈ ಹೇಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತೀವ್ರವಾಗಿ ಖಂಡಿಸಿದ್ದು, ಅವರು ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ಸೂಚಿಸಿದ್ದರು.
ಜೋಷಿಯವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದ ಆದರ್ಶಗಳು ಹಾಗೂ ಚಿಂತನೆಗಳಿಗೆ ಹೋಲಿಕೆ ಮಾಡಬಾರದು. ಯಾವುದೇ ಸಮುದಾಯ ಭಾವನೆಗಳಿಗೆ ನೋವಾಗುವಂತಹ ಹೇಳಿಕೆಯನ್ನು ಪಕ್ಷದ ನಾಯಕರು ನೀಡಬಾರದು ಎಂದು ರಾಹುಲ್ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.