ಪ್ರಧಾನಿ ವಿರುದ್ಧ ಕಾಂಗ್ರೆಸ್ ನಾಯಕ ಸಿ.ಪಿ ಜೋಷಿ ನಿಂದನೆ: ಕೈ ಪಾಲಿಗೆ ಮತ್ತೊಂದು ಗುಜರಾತ್ ಆಗುತ್ತಾ ರಾಜಸ್ಥಾನ?
ಚುನಾವಣಾ ಕಣವಾಗಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ವಿವಾದಾತ್ಮಕ ಹೇಳಿಕೆ, ನಡೆಗಳಿಂದ ಸುದ್ದಿಯಲ್ಲಿದೆ.

Published On :
ಜೈಪುರ: ಚುನಾವಣಾ ಕಣವಾಗಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ವಿವಾದಾತ್ಮಕ ಹೇಳಿಕೆ, ನಡೆಗಳಿಂದ ಸುದ್ದಿಯಲ್ಲಿದೆ. ಇದೇ ಮಾದರಿಯ ವಿವಾದಗಳಿಂದಲೇ ಗುಜರಾತ್ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ಸ್ವಲ್ಪ ಮಟ್ಟಿಗಿನ ಹಿನ್ನಡೆಯುಂಟಾಗಿತ್ತು. ಆದರೆ ಇದರಿಂದ ಎಚ್ಚೆತ್ತುಕೊಳ್ಳದ ಕಾಂಗ್ರೆಸ್ ನಾಯಕರು ರಾಜಸ್ಥಾನದಲ್ಲಿಯೂ ವಿವಾದಾತ್ಮಕ ಹೇಳಿಕೆಗಳನ್ನು ಮುಂದುವರೆಸಿದ್ದಾರೆ.
ರಾಜಸ್ಥಾನದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕ ಸಿ.ಪಿ ಜೋಷಿ, ಪ್ರಧಾನಿ ವಿರುದ್ಧ ಜಾತೀಯತೆ ನಿಂದನೆ ಮಾಡಿದ್ದು ಕೇವಲ ಬ್ರಾಹ್ಮಣರಷ್ಟೇ ಹಿಂದೂ ಧರ್ಮವನ್ನು ತಿಳಿದಿದ್ದಾರೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವೆ ಉಮಾ ಭಾರತಿ ಅವರ ಜಾತಿಯನ್ನು ಪ್ರಶ್ನಿಸಿದ್ದು, ಹಿಂದೂ ಧರ್ಮದ ಕುರಿತಾಗಿ ಅವರಿಗಿರುವ ಜ್ಞಾನವನ್ನು ಪ್ರಶ್ನಿಸಿದ್ದಾರೆ.
ಉಮಾ ಭಾರತಿ ಅವರ ಜಾತಿಯ ಬಗ್ಗೆ ಯಾರಿಗಾದರೂ ಗೊತ್ತಾ? ಸಾಧ್ವಿ ರಿತಾಂಭರ ಅವರ ಜಾತಿ ಗೊತ್ತಾ? ಯಾರಿಗಾದರೂ ಧರ್ಮದ ಬಗ್ಗೆ ಗೊತ್ತಿದ್ದರೆ ಅದು ಪಂಡಿತರಿಗೆ ಮಾತ್ರ, ಲೋದಿ ಸಮುದಾಯಕ್ಕೆ ಸೇರಿದ ಉಮಾ ಭಾರತಿ ಹಿಂದೂ ಧರ್ಮದ ಬಗ್ಗೆ ಮಾತನಾಡುವುದು ವಿಚಿತ್ರವಾಗಿದೆ ಎಂದು ಜೋಷಿ ಹೇಳಿದ್ದಾರೆ.
ಸಾಧ್ವಿ ರಿತಾಂಭರ ಬೇರೆ ಧರ್ಮಕ್ಕೆ ಸೇರಿದವರು ಆದರೆ ಹಿಂದೂ ಧರ್ಮದ ಬಗ್ಗೆ ಮಾತನಾಡುತ್ತಾರೆ. ನರೇಂದ್ರ ಮೋದಿ ಸಹ ಬೇರೆ ಧರ್ಮಕ್ಕೆ ಸೇರಿದವರು ಆದರೆ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ಹಿಂದುತ್ವದ ಬಗ್ಗೆ ಮಾತನಾಡುವುದು ಅವರ ಕೆಲಸ ಅಲ್ಲ. ಕೇವಲ ಬ್ರಾಹ್ಮಣರಿಗಷ್ಟೇ ಹಿಂದೂ ಧರ್ಮದ ಬಗ್ಗೆ ಗೊತ್ತಿದೆ ಎಂದು ಸಿಪಿ ಜೋಷಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರಧಾನಿ ನರೇಂದ್ರ ಮೋದಿHinduismಹಿಂದೂ ಧರ್ಮRajasthan Assembly PollsPM Modi casteist slurರಾಜಸ್ಥಾನ ವಿಧಾನಸಭಾ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


