ದೇಶ

ಜಮ್ಮು-ಕಾಶ್ಮೀರ: ಮಾಜಿ ವಿಶೇಷ ಪೊಲೀಸ್ ಅಧಿಕಾರಿ ಅಪಹರಿಸಿ ಹತ್ಯೆಗೈದ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಾಜಿ ವಿಶೇಷ ಪೊಲೀಸ್ ಅಧಿಕಾರಿಯನ್ನು ಅಪಹರಣ ಮಾಡಿದ ಕೆಲವೇ ಗಂಟೆಗಳಲ್ಲಿ ಅವರನ್ನು ಹತ್ಯೆ ಮಾಡಿದ್ದಾರೆ...

ಜಮ್ಮು-ಕಾಶ್ಮೀರ: ಮಾಜಿ ವಿಶೇಷ ಪೊಲೀಸ್ ಅಧಿಕಾರಿ ಅಪಹರಿಸಿ ಹತ್ಯೆಗೈದ ಉಗ್ರರು
ಸಂಗ್ರಹ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಾಜಿ ವಿಶೇಷ ಪೊಲೀಸ್ ಅಧಿಕಾರಿಯನ್ನು ಅಪಹರಣ ಮಾಡಿದ ಕೆಲವೇ ಗಂಟೆಗಳಲ್ಲಿ ಅವರನ್ನು ಹತ್ಯೆ ಮಾಡಿದ್ದಾರೆ. 
ಅಧಿಕಾರಿ ಅಪಹರಣಕ್ಕೊಳಗಾದ ಕೆಲ ಗಂಟೆಗಳ ಬಳಿಕ ಅವರ ದೇಹ ಗುಂಡು ಹೊಕ್ಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ಬಶರತ್ ಅಹ್ಮದ್ ವಾಗಾಯ್ ಹತ್ಯೆಯಾದ ಮಾಜಿ ವಿಶೇಷ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅಧಿಕಾರಿಯ ಅಪಹರಣದ ಬೆನ್ನಲ್ಲೇ ಮತ್ತೆ ಮೂವರು ವ್ಯಕ್ತಿಗಳನ್ನೂ ಕೂಡ ಉಗ್ರರು ಅಪಹರಣ ಮಾಡಿದ್ದರು. ನಂತರ ಅವರನ್ನು ಬಿಡುಗಡೆ ಮಾಡಿದ್ದರು. 
ಬಿಡುಗಡೆಗೊಂಡ ಯುವಕರನ್ನು ರಿಯಾಜ್ ಅಹ್ಮದ್, ಜಾಹಿದ್ ಅಹ್ಮದ್ ಮತ್ತು ಬಶರತ್ ಅಹ್ಮದ್ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.